ಗುರುವಾರ ಬೆಳಿಗ್ಗೆ 9:30ಕ್ಕೆ ಯಡಿಯೂರಪ್ಪ ಪ್ರಮಾಣ ವಚನ: ಸುರೇಶ್ ಕುಮಾರ್ ಟ್ವೀಟ್

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚನೆಗಾಗಿ ರಾಜ್ಯಪಾಲರನ್ನು ಭೇಟಿ ಮಾಡಿ,117 ಶಾಸಕರ ಬೆಂಬಲ ತಿಳಿಯ ಪಡಿಸಿರುವ ಬೆನ್ನಲೇ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಸುದ್ದಿ ಹೊರಬಂದಿದೆ.
ಗುರುವಾರ ಬೆಳಿಗ್ಗೆ 9:30ಕ್ಕೆ ರಾಜಭವನದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಟ್ವೀಟಿಸಿದ್ದಾರೆ.
ನಾಳೆ, ಗುರುವಾರ ಬೆಳಿಗ್ಗೆ ೯.೩೦ ಗಂಟೆಗೆ ರಾಜಭವನದಲ್ಲಿ ಸನ್ಮಾನ್ಯ ಬಿ.ಎಸ್.ಯಡ್ಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಂತಸ ಗಳಿಗೆಯಲ್ಲಿ ಭಾಗಿಯಾಗಲು ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ.
— Sureshkumar (@nimmasuresh) May 16, 2018
ಕಾಂಗ್ರೆಸ್ ಶಾಸಕರು ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ಸೇರಿದ ಬಳಿಕ ಬಿಡದಿ ಸಮೀಪದ ರೆಸಾರ್ಟ್ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಕುದುರೆ ವ್ಯಾಪಾರ ತಡೆಯುವ ನಿಟ್ಟಿನಲ್ಲಿ ಈ ಕ್ರಮ ವಹಿಸಿರುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಸರ್ಕಾರದ ರಚನೆಗೆ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿರುವ ಕುರಿತು ರಾಜ್ಯಪಾಲರಿಗೆ ತಿಳಿಸಿ, 117 ಶಾಸಕರ ಸಹಿಯನ್ನು ಒಳಗೊಂಡ ಪಟ್ಟಿಯನ್ನು ರಾಜ್ಯಪಾಲರಿಗೆ ಜಿ.ಪರಮೇಶ್ವರ ಹಾಗೂ ಎಚ್.ಡಿ.ಕುಮಾರಸ್ವಾಮಿ ನೀಡಿದ್ದರು. ‘ಸುಪ್ರೀಂಕೊರ್ಟ್ ನಿರ್ದೇಶನದಂತೆ ಸಾಂವಿಧಾನಿಕವಾಗಿ ತೀರ್ಮಾನ ತೆಗೆದುಕೊಳ್ಳುವುದಾಗಿ’ ರಾಜ್ಯಪಾಲರು ಭರವಸೆ ನೀಡಿದ್ದರು.
ಇನ್ನಷ್ಟು: ರೆಸಾರ್ಟ್ ಕಡೆಗೆ ಕಾಂಗ್ರೆಸ್ ಶಾಸಕರು
ರಾಜ್ಯಪಾಲರಿಗೆ ಕಾಂಗ್ರೆಸ್–ಜೆಡಿಎಸ್ ಶಾಸಕರ ಮನವಿ; 117 ಶಾಸಕರ ಸಹಿ ಒಳಗೊಂಡ ಪಟ್ಟಿ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.