ಗುರುವಾರ ಬೆಳಗ್ಗೆ 9 ಗಂಟೆಗೆ ಯಡಿಯೂರಪ್ಪ ಪ್ರಮಾಣ ವಚನ : ಮುರುಳೀಧರ ರಾವ್‌

7

ಗುರುವಾರ ಬೆಳಗ್ಗೆ 9 ಗಂಟೆಗೆ ಯಡಿಯೂರಪ್ಪ ಪ್ರಮಾಣ ವಚನ : ಮುರುಳೀಧರ ರಾವ್‌

Published:
Updated:
ಗುರುವಾರ ಬೆಳಗ್ಗೆ 9 ಗಂಟೆಗೆ ಯಡಿಯೂರಪ್ಪ ಪ್ರಮಾಣ ವಚನ : ಮುರುಳೀಧರ ರಾವ್‌

ಬೆಂಗಳೂರು: ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಗುರುವಾರ ಬೆಳಗ್ಗೆ 9 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿಯ ರಾಜ್ಯ ಉಸ್ತುವಾರಿ ಮುರುಳೀಧರ ರಾವ್‌ ತಿಳಿಸಿದ್ದಾರೆ.

ಬಿಜೆಪಿಯ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಈಗತಾನೇ ರಾಜಭವನದಿಂದ ಅಧಿಕೃತ ಮಾಹಿತಿ ಬಂದಿದ್ದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಸಾಂವಿಧಾನಿಕವಾಗಿ ರಾಜ್ಯಪಾಲರು ಬಿಜೆಪಿಗೆ ಅವಕಾಶ ಕೊಟ್ಟಿದ್ದಾರೆ. ಚುನಾವಣೆ ಪೂರ್ವ ಮೈತ್ರಿ ಇಲ್ಲದ ಪಕ್ಷಗಳಿಗೆ ಸಂವಿಧಾನದಲ್ಲಿ ಮಾನ್ಯತೆ ಇಲ್ಲ ಎಂದರು.

ಕರ್ನಾಟಕದ ಜನರು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳನ್ನು ತಿರಸ್ಕರಿಸಿದ್ದಾರೆ ಆದರೂ ಅವರು ಪ್ರಜಾಪ್ರಭುತ್ವದ ಆಶಯಗಳನ್ನು ಮರೆತು ಅಧಿಕಾರ ಹಿಡಿಯಲು ಹೊರಟಿರುವುದು ಸರಿಯಲ್ಲ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry