ಗೆಲುವಿನ ಅಂತರ: ಹತ್ತಿರ, ದೂರ...

7

ಗೆಲುವಿನ ಅಂತರ: ಹತ್ತಿರ, ದೂರ...

Published:
Updated:
ಗೆಲುವಿನ ಅಂತರ: ಹತ್ತಿರ, ದೂರ...

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದ ಹೆಗ್ಗಳಿಕೆಗೆ ಬೆಂಗಳೂರಿನ ಪುಲಕೇಶಿ ನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಖಂಡ ಶ್ರೀನಿವಾಸಮೂರ್ತಿ ಪಾತ್ರರಾಗಿದ್ದಾರೆ.

ಜೆಡಿಎಸ್‌ ತೊರೆದು ‘ಕೈ’ ಪಕ್ಷದಿಂದ ಕಣಕ್ಕಿಳಿದಿದ್ದ ಅವರು 97,574 ಮತಗಳನ್ನು ಗಳಿಸಿದ್ದರೆ, ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್‌ನ ಬಿ. ಪ್ರಸನ್ನ ಕುಮಾರ್‌ 15,948 ಮತಗಳನ್ನಷ್ಟೇ ಪಡೆದಿದ್ದಾರೆ.

ಅತ್ಯಂತ ಕಡಿಮೆ ಮತಗಳ ಅಂತರದಿಂದ ಗೆದ್ದಿರುವ ಅಭ್ಯರ್ಥಿಯೂ ಕಾಂಗ್ರೆಸ್‌ನವರೇ. ಮಸ್ಕಿಯಿಂದ ಸ್ಪರ್ಧಿಸಿದ್ದ ಪ್ರತಾಪಗೌಡ ಪಾಟೀಲ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಬಸನಗೌಡ ತುರ್ವಿಹಾಳ ಅವರ ಎದುರು ಕೇವಲ 213 ಮತಗಳ ಅಂತರದಿಂದ ಗೆದ್ದಿದ್ದಾರೆ.

2,000ಕ್ಕಿಂತಲೂ ಕಡಿಮೆ ಮತಗಳ ಅಂತರದಿಂದ ಗೆದ್ದವರ ಪಟ್ಟಿಯಲ್ಲಿ ಸಿದ್ದರಾಮಯ್ಯ (ಬಾದಾಮಿ ಕ್ಷೇತ್ರ) ಇದ್ದರೆ, 50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದವರ ಪಟ್ಟಿಯಲ್ಲಿ ಅವರ ಪುತ್ರ ಡಾ. ಯತೀಂದ್ರ ಇದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry