ನವದೆಹಲಿ: ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ರಾಜ್ಯಪಾಲರ ಆದೇಶಕ್ಕೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಕಾನೂನು ಹೋರಾಟಕ್ಕೆ ಹಿನ್ನಡೆಯಾಗಿದೆ.
ಸುಪ್ರೀಂ ಕೋರ್ಟ್ನ ಕೊಠಡಿ ಸಂಖ್ಯೆ 6ರಲ್ಲಿ ಮಧ್ಯರಾತ್ರಿ 1.45ಕ್ಕೆ ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ, ಎಸ್.ಎ. ಬೋಬ್ಡೆ ಹಾಗೂ ಅಶೋಕ್ ಭೂಷಣ್ ಅವರಿದ್ದ ನ್ಯಾಯಪೀಠ ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಸಿದ್ದ ಅರ್ಜಿಯ ವಿಚಾಣೆ ನಡೆಸಿತು. ಸತತವಾಗಿ 2 ಗಂಟೆಗಳ ವಿಚಾರಣೆ ನಡೆಯಿತು.