ಯಡಿಯೂರಪ್ಪ ಪ್ರಮಾಣವಚನ: ಕಾಂಗ್ರೆಸ್‌, ಜೆಡಿಎಸ್‌ನಿಂದ ಪ್ರತಿಭಟನೆ

7

ಯಡಿಯೂರಪ್ಪ ಪ್ರಮಾಣವಚನ: ಕಾಂಗ್ರೆಸ್‌, ಜೆಡಿಎಸ್‌ನಿಂದ ಪ್ರತಿಭಟನೆ

Published:
Updated:
ಯಡಿಯೂರಪ್ಪ ಪ್ರಮಾಣವಚನ: ಕಾಂಗ್ರೆಸ್‌, ಜೆಡಿಎಸ್‌ನಿಂದ ಪ್ರತಿಭಟನೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ತೀರ್ಮಾನಿಸಿವೆ ಎಂದು ಮೂಲಗಳು ತಿಳಿಸಿವೆ.

ಬಿಡದಿಯ ಈಗಲ್‌ಟನ್ ರೆಸಾರ್ಟ್‌ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್‌ ಶಾಸಕರನ್ನು ಬೆಂಗಳೂರಿಗೆ ಕರೆದುಕೊಂಡು ಬರಲು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ. ರಾಜಭವನದ ಮುಂದೆ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಲಾಗಿದೆ ಎನ್ನಲಾಗಿದೆ.

ಯಡಿಯೂರಪ್ಪ ಪ್ರಮಾಣವಚನಕ್ಕೆ ತಡೆ ಕೋರಿ ಕಾಂಗ್ರೆಸ್ ಮತ್ತು ಜೆಡಿಎಸ್‌ ಪಕ್ಷಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ ಮಧ್ಯರಾತ್ರಿ ವಿಚಾರಣೆ ನಡೆಸಿದೆ. ಅಲ್ಲದೆ, ಪ್ರಮಾಣ ವಚನಕ್ಕೆ ತಡೆಯೊಡ್ಡಲು ನಿರಾಕರಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry