ದೇವರು, ರೈತರ ಹೆಸರಿನಲ್ಲಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಹಸಿರು ಶಾಲು ಹೊದ್ದು ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ದೇವರು ಮತ್ತು ರೈತರ ಹೆಸರಿನಲ್ಲಿ ಅವರು ಪ್ರಮಾಣ ಸ್ವೀಕರಿಸಿದರು.
ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಹೂಗುಚ್ಚ ನೀಡುವ ಮೂಲಕ ಯಡಿಯೂರಪ್ಪ ಅವರಿಗೆ ವಜುಭಾಯಿ ವಾಲ ಅವರು ಶುಭ ಕೋರಿದರು.
ಈ ಮೂಲಕ ಯಡಿಯೂರಪ್ಪ ಅವರು 23ನೇ ಮುಖ್ಯಮಂತ್ರಿಯಾಗಿ ಹಾಗೂ ಮೂರನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿದರು.
LIVE : Shri @BSYBJP takes oath as Karnataka CM. #BSYNammaCM https://t.co/ak9qvTyTkz
— BJP (@BJP4India) May 17, 2018
10 ನಿಮಿಷದಲ್ಲಿ ಕಾರ್ಯಕ್ರಮ ಮುಕ್ತಾಯವಾಯಿತು. ಬಳಿಕ, ಯಡಿಯೂರಪ್ಪ ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ ಮುಖಂಡರು ಹೂ ಗುಚ್ಚಗಳನ್ನು ನೀಡಿ ಅಭಿನಂದಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.