ಈಗಲ್‌ಟನ್ ರೆಸಾರ್ಟ್‌ಗೆ ಕುಮಾರಸ್ವಾಮಿ ಭೇಟಿ: ‘ಕೈ’ ನಾಯಕರ ಜತೆ ಚರ್ಚೆ

7

ಈಗಲ್‌ಟನ್ ರೆಸಾರ್ಟ್‌ಗೆ ಕುಮಾರಸ್ವಾಮಿ ಭೇಟಿ: ‘ಕೈ’ ನಾಯಕರ ಜತೆ ಚರ್ಚೆ

Published:
Updated:
ಈಗಲ್‌ಟನ್ ರೆಸಾರ್ಟ್‌ಗೆ ಕುಮಾರಸ್ವಾಮಿ ಭೇಟಿ: ‘ಕೈ’ ನಾಯಕರ ಜತೆ ಚರ್ಚೆ

ರಾಮನಗರ: ಬಿಡದಿಯ ಈಗಲ್‌ಟನ್ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕರ ವಾಸ್ತವ್ಯ ಮುಂದುವರಿದಿದೆ.

ಬುಧವಾರ ತಡರಾತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ರೆಸಾರ್ಟ್‌ಗೆ ಭೇಟಿ‌ ನೀಡಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಕುರಿತು ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ, ಜಿ.ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ.‌ ಶಿವಕುಮಾರ್ ಅವರ ಜೊತೆ ಚರ್ಚಿಸಿದರು.‌ ಈ ಸಂದರ್ಭ ಶಾಸಕ ಜಮೀರ್ ಅಹಮ್ಮದ್ ಖಾನ್ ಸಹ ಭೇಟಿಯಾಗಿ ಕೈ ಕುಲುಕಿದರು ಎನ್ನಲಾಗಿದೆ.

ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ರಾಜಭವನದ ಮುಂದೆ ಕಾಂಗ್ರೆಸ್ ಶಾಸಕರು ಪ್ರತಿಭಟನೆಗೆ ನಿರ್ಧರಿಸಿದ್ದರು. ಆದರೆ ಅವರು ಇನ್ನೂ ರೆಸಾರ್ಟ್‌ನಿಂದ ಹೊರಗೆ ಬಂದಿಲ್ಲ‌.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry