ಶಿವಮೊಗ್ಗ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ

7

ಶಿವಮೊಗ್ಗ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ

Published:
Updated:
ಶಿವಮೊಗ್ಗ: ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ

ಶಿವಮೊಗ್ಗ: ರಾಜ್ಯಪಾಲರು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಿದರು.

ಈ ವೇಳೆ, ಕೆಲ ಕಾರ್ಯಕರ್ತರು ಟೊಮೆಟೊ ಎಸೆದು ಪ್ರತಿಭಟನೆ ನಡೆಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು 25ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಜಿಲ್ಲಾ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ , ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಪ್ರವೀಣ್ ಕುಮಾರ್, ನಗರಾಧ್ಯಕ್ಷ ಎಚ್.ಪಿ. ಗಿರೀಶ್, ರಾಜ್ಯ ಪ್ರಧಾನ  ಕಾರ್ಯದರ್ಶಿಗಳಾದ ಆರ್. ಕಿರಣ್, ಟಿವಿ ರಂಜಿತ್ ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry