ವಿಧಾನಸೌಧದ ಬಳಿ ಪ್ರತಿಭಟನೆ: ಜೆಡಿಎಸ್‌ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

7

ವಿಧಾನಸೌಧದ ಬಳಿ ಪ್ರತಿಭಟನೆ: ಜೆಡಿಎಸ್‌ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

Published:
Updated:
ವಿಧಾನಸೌಧದ ಬಳಿ ಪ್ರತಿಭಟನೆ: ಜೆಡಿಎಸ್‌ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಧಾನಸೌಧದ ಪಶ್ಚಿ‌ಮ ಗೇಟ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರಿಗೆ ಸ್ಥಳದಿಂದ ತೆರಳಲು ಪೊಲೀಸರು ಸೂಚನೆ ನೀಡಿದರು. ಆದರೆ,‌ ಇದನ್ನು ನಿರಾಕರಿಸಿದ ಪ್ರತಿಭಟನಾಕಾರರು ಪ್ರತಿಭಟನೆ ತೀವ್ರಗೊಳಿಸಿದರು. ನಂತರ, ಪ್ರತಿಭಟನಾನಿರತರನ್ನು ವಶಕ್ಕೆ ಪಡೆದ ಪೊಲೀಸರು ಅವರನ್ನು ಬಿಎಂಟಿಸಿ ಬಸ್‌ನಲ್ಲಿ ಅಲ್ಲಿಂದ ಕರೆದೊಯ್ಯಲಾಗಿದೆ.

ಈ ಮಧ್ಯೆ, ಅಲ್ಲಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry