7

ರಾಜ್ಯದಲ್ಲಿ ಗದ್ದುಗೆ ಏರಿದ ಮುಖ್ಯಮಂತ್ರಿಗಳು ಯಾರ್‍ಯಾರು?

Published:
Updated:
ರಾಜ್ಯದಲ್ಲಿ ಗದ್ದುಗೆ ಏರಿದ ಮುಖ್ಯಮಂತ್ರಿಗಳು ಯಾರ್‍ಯಾರು?

ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ ಎಷ್ಟನೇ ಮುಖ್ಯಮಂತ್ರಿ?

ಈ ಪ್ರಶ್ನೆ ಈಗ ಸಾರ್ವಜನಿಕ ವಲಯವನ್ನು ತೀವ್ರವಾಗಿ ಕಾಡುತ್ತಿದೆ. ಅವರು 22ನೇ ಮುಖ್ಯಮಂತ್ರಿ ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರ ಪ್ರಕಾರ 29ನೇ ಮುಖ್ಯಮಂತ್ರಿ. ರಾಜ್ಯದ ಮುಖ್ಯಮಂತ್ರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ವ್ಯಕ್ತಿಗಳ ಸಂಖ್ಯೆಯನ್ನು ಗಣನೆಗೆ ತೆಗೆದುಕೊಂಡರೆ ಯಡಿಯೂರಪ್ಪ 22ನೆಯವರು.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಸಂಖ್ಯೆಯನ್ನು ಲೆಕ್ಕ ಹಾಕಿದರೆ 29ನೆಯವರಾಗುತ್ತಾರೆ. ಬಿ.ಎಸ್‌.ಯಡಿಯೂರಪ್ಪ 22ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದು ಸೇರಿದಂತೆ 22 ಮಂದಿ ಮುಖ್ಯಮಂತ್ರಿ ಗಾದಿ ಏರಿದ್ದಾರೆ.

ರಾಮಕೃಷ್ಣ ಹೆಗಡೆ ಮತ್ತು ಬಿ.ಎಸ್‌.ಯಡಿಯೂರಪ್ಪ(ಗುರುವಾರ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದು ಸೇರಿ) ತಲಾ ಮೂರು ಬಾರಿ, ಎಸ್. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್, ಡಿ.ದೇವರಾಜ ಅರಸು ತಲಾ ಎರಡು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದು ಈ ವ್ಯತ್ಯಾಸಕ್ಕೆ ಕಾರಣ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry