ಕರ್ನಾಟಕ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ ರಾಂ ಜೇಠ್ಮಲಾನಿ

ನವದೆಹಲಿ: ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲ ಅವರ ಕ್ರಮ ಪ್ರಶ್ನಿಸಿ ಹಿರಿಯ ವಕೀಲ ರಾಂ ಜೇಠ್ಮಲಾನಿ ಸುಪ್ರೀಂ ಕೋರ್ಟ್ ಮಟ್ಟಿಲೇರಿದ್ದಾರೆ.
ವೈಯಕ್ತಿಕ ನೆಲೆಗಟ್ಟಿನಲ್ಲಿ ಅವರು ವಜುಭಾಯಿ ವಾಲ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಜೇಠ್ಮಲಾನಿ ಅರ್ಜಿಯ ವಿಚಾರಣೆಯನ್ನು ಶುಕ್ರವಾರಕ್ಕೆ ನಿಗದಿಪಡಿಸಿದ್ದಾರೆ. ಜತೆಗೆ, ವಿಚಾರಣೆಗೆ ಹಾಜರಾಗುವಂತೆ ಜೇಠ್ಮಲಾನಿಗೆ ಸೂಚಿಸಿದ್ದಾರೆ.
‘ರಾಜ್ಯಪಾಲರ ನಿರ್ಧಾರ ಸಾಂವಿಧಾನಿಕ ಅಧಿಕಾರದ ದುರುಪಯೋಗವಾಗಿದ್ದು, ರಾಜ್ಯಪಾಲರ ಹುದ್ದೆಯ ಘನತೆಗೆ ಅಪಖ್ಯಾತಿ ತಂದಿದೆ’ ಎಂದು ಅರ್ಜಿಯಲ್ಲಿ ಜೇಠ್ಮಲಾನಿ ಉಲ್ಲೇಖಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.