ಬಿಹಾರದಲ್ಲಿ ಆರ್‌ಜೆಡಿ ಅತಿ ದೊಡ್ಡ ಪಕ್ಷ; ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಮನವಿ: ತೇಜಸ್ವಿ ಯಾದವ್

ನವದೆಹಲಿ: ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿಗೆ ಕರ್ನಾಟಕದಲ್ಲಿ ಸರ್ಕಾರ ರಚನೆಗೆ ಅವಕಾಶ ನೀಡಿರುವ ಬೆನ್ನಲೇ ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಅಲ್ಲಿನ ರಾಜ್ಯಪಾಲರಲ್ಲಿ ಸರ್ಕಾರ ರಚನೆಗಾಗಿ ಹಕ್ಕು ಮಂಡಿಸಲು ಅವಕಾಶ ಕೋರಲು ನಿರ್ಧರಿಸಿದೆ.
ಬಿ.ಎಸ್.ಯಡಿಯೂರಪ್ಪ ಗುರುವಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬೆಂಗಳೂರಿನಲ್ಲಿ ಧರಣಿ ಕುಳಿತರು. ಗೋವಾದಲ್ಲಿ ಕಾಂಗ್ರೆಸ್ ಶಾಸಕರು ರಾಜ್ಯಪಾಲರ ಭೇಟಿಗೆ ಸಜ್ಜಾಗಿದ್ದರೆ, ಮತ್ತೊಂದು ಕಡೆ ಬಿಹಾರದಲ್ಲಿ ಆರ್‌ಜೆಡಿ ಕೂಡ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ಕೋರಲಿದೆ.
‘ಬಿಹಾರದಲ್ಲಿ ಆರ್‌ಜೆಡಿ ಅತಿ ಹೆಚ್ಚು ಸ್ಥಾನ ಪಡೆದಿರುವ ಪಕ್ಷವಾಗಿದೆ. ಕರ್ನಾಟಕದಲ್ಲಿ ಅತಿ ದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಲಾಗಿದೆ. ಹಾಗಾಗಿ, ನಾವೂ ಸಹ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಲಿದ್ದೇವೆ.’ ಎಂದು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಹರಣವನ್ನು ವಿರೋಧಿಸಿ ಶುಕ್ರವಾರ ಒಂದು ದಿನದ ಧರಣಿ ನಡೆಸುವುದಾಗಿ ಘೋಷಿಸಿದ್ದಾರೆ.
We would be holding a 1-day dharna tomorrow against the murder of democracy in Karnataka. We also request the Bihar Governor to dissolve the state government & like in Karnataka invite the single largest party, which in #Bihar is the RJD: Tejashwi Yadav, RJD (file pic) pic.twitter.com/FNDg8qe1Nz
— ANI (@ANI) May 17, 2018
ಇನ್ನಷ್ಟು: ಗೋವಾದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್ ಕಸರತ್ತು: ಶುಕ್ರವಾರ ರಾಜ್ಯಪಾಲರ ಮುಂದೆ ಪರೇಡ್ ನಡೆಸಲು ಶಾಸಕರು ಸಜ್ಜು
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.