ವಿಮಾನದ ಶೌಚಾಲಯದಲ್ಲಿ ಚಿನ್ನ ಪತ್ತೆ

7
ದುಬೈನಿಂದ ಸಂಘಟಿತ ಕಳ್ಳಸಾಗಣೆ ಜಾಲದ ಪ್ರಯತ್ನ

ವಿಮಾನದ ಶೌಚಾಲಯದಲ್ಲಿ ಚಿನ್ನ ಪತ್ತೆ

Published:
Updated:
ವಿಮಾನದ ಶೌಚಾಲಯದಲ್ಲಿ ಚಿನ್ನ ಪತ್ತೆ

ಮಂಗಳೂರು: ಮೊದಲು ದುಬೈನಿಂದ ಮುಂಬೈಗೆ ಬಂದಿದ್ದ ವಿಮಾನದ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ಮಂಗಳೂರಿಗೆ ಸಾಗಿಸುವ ಪ್ರಯತ್ನವೊಂದನ್ನು ವಿಫಲಗೊಳಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು, ₹ 66.67 ಲಕ್ಷ ಮೌಲ್ಯದ 2.11 ಕೆ.ಜಿ. ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದ ಮೂಲಕ ಚಿನ್ನ ಕಳ್ಳಸಾಗಣೆಗೆ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಗುರುವಾರ ನಸುಕಿನ ಜಾವ ವಿಮಾನ ನಿಲ್ದಾಣಕ್ಕೆ ದೌಡಾಯಿಸಿದ ಡಿಆರ್‌ಐ ಅಧಿಕಾರಿಗಳ ತಂಡ ಶೋಧ ಆರಂಭಿಸಿತ್ತು. ಮುಂಬೈನಿಂದ ಬಂದ ಸ್ಪೈಸ್‌ ಜೆಟ್‌ ಎಸ್‌ಜಿ 479 ಸಂಖ್ಯೆಯ ವಿಮಾನದಲ್ಲಿ ತೀವ್ರ ತಪಾಸಣೆ ನಡೆಸಲಾಯಿತು. ಅದರ ಶೌಚಾಲಯದ ಮೇಲಿನ ಚಾವಣಿಯ ಒಳಗೆ ಆಮ್ಲಜನಕ ಕವಚ ಇರಿಸಿದ್ದ ಪ್ಯಾನೆಲ್‌ ಒಳಗೆ ಚಿನ್ನ ಪತ್ತೆ ಹಚ್ಚಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry