ಶುಕ್ರವಾರ, ಫೆಬ್ರವರಿ 26, 2021
20 °C

ಹತಾಶ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಕೊಲೆ : ಅಮಿತ್ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

ಹತಾಶ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಕೊಲೆ : ಅಮಿತ್ ಶಾ

ನವದೆಹಲಿ : ಹತಾಶ ಕಾಂಗ್ರೆಸ್ ‘ಕ್ಷುಲ್ಲಕ ರಾಜಕೀಯ ಲಾಭಕ್ಕಾಗಿ’ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಳ್ಳಲು ಮುಂದಾದ ಕ್ಷಣವೇ ಪ್ರಜಾಪ್ರಭುತ್ವದ ಕೊಲೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

ಸರ್ಕಾರ ರಚಿಸಲು ಬಿಜೆಪಿ ಮುಖಂಡ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಆಹ್ವಾನ ನೀಡಿದ್ದು ಪ್ರಜಾಪ್ರಭುತ್ವದ ಕೊಲೆ ಎಂದು ಕಾಂಗ್ರೆಸ್ ಬುಧವಾರ ಟೀಕಿಸಿತ್ತು.

‘ಕರ್ನಾಟಕದಲ್ಲಿ ಸರ್ಕಾರ ರಚಿಸಲು ಜನಾದೇಶ ಪಡೆದವರು 104 ಸ್ಥಾನ ಗಳಿಸಿದ ಬಿಜೆಪಿಯೇ ಅಥವಾ ಭಾರಿ ಅಂತರದಿಂದ ಸೋಲನುಭವಿಸಿದ ಮುಖ್ಯಮಂತ್ರಿ ಹಾಗೂ 78 ಸ್ಥಾನಗಳಿಗೆ ಇಳಿಕೆ ಕಂಡ ಕಾಂಗ್ರೆಸ್‌ ಪಕ್ಷವೇ? ಕೇವಲ 38 ಸ್ಥಾನ ಗಳಿಸಿದ ಜೆಡಿಎಸ್ ಹಲವು ಕಡೆಗಳಲ್ಲಿ ಠೇವಣಿ ಕಳೆದುಕೊಂಡಿದೆ. ಜನರು ಬುದ್ಧಿವಂತರಿದ್ದಾರೆ. ಅವರಿಗೆ ವಾಸ್ತವ ಅರಿವಾಗುತ್ತದೆ’ ಎಂದು ಶಾ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.