ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯ ಸಂಸ್ಥೆ ಚುನಾವಣೆ: ಟಿಎಂಸಿ ಪಾರಮ್ಯ

Last Updated 17 ಮೇ 2018, 19:30 IST
ಅಕ್ಷರ ಗಾತ್ರ

ಕೋಲ್ಕತ್ತ : ಪಶ್ಚಿಮ ಬಂಗಾಳದ ಸ್ಥಳೀಯ ಸಂಸ್ಥೆಗಳ ಮೇಲೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತೆ ಹಿಡಿತ ಸಾಧಿಸಿದೆ. ಬಹುತೇಕ ಗ್ರಾಮ ಪಂಚಾಯಿತಿ, ಜಿಲ್ಲಾ ಪರಿಷತ್ ಹಾಗೂ ಪಂಚಾಯಿತಿ ಸಮಿತಿಗಳನ್ನು ಟಿಎಂಸಿ ಗೆದ್ದುಕೊಂಡಿದೆ.

ಆಡಳಿತಾರೂಢ ಪಕ್ಷಕ್ಕೆ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆಯೊಡ್ಡಿದ್ದು ಎರಡನೇ ಸ್ಥಾನದಲ್ಲಿದೆ. ಮುರ್ಷಿದಾಬಾದ್, ಮಾಲ್ಡಾ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಆಡಳಿತ ಪಕ್ಷಕ್ಕೆ ಬಿಜೆಪಿ ಪ್ರಬಲ ಪೈಪೋಟಿ ನೀಡಿದೆ. ಪುರುಲಿಯಾದಲ್ಲಿ ಟಿಎಂಸಿ ವಿರುದ್ಧ ಬಿಜೆಪಿ ಪಾರಮ್ಯ ಮೆರೆದಿದೆ.

621 ಜಿಲ್ಲಾ ಪರಿಷತ್, 6,123 ಪಂಚಾಯಿತಿ ಸಮಿತಿ ಹಾಗೂ 31,802 ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ಮೇ 14ರಂದು ಚುನಾವಣೆ ನಡೆದಿತ್ತು.

ಗುರುವಾರ ನಡೆದ ಮತ ಎಣಿಕೆ ವೇಳೆ ಕೆಲವು ಕಡೆ ಘರ್ಷಣೆ ನಡೆದಿದೆ. ಟಿಎಂಸಿ ಕಾರ್ಯಕರ್ತರು ಪ್ರತಿಪಕ್ಷದ ಅಭ್ಯರ್ಥಿಗಳು ಹಾಗೂ ಮತಗಟ್ಟೆ ಏಜೆಂಟರ ಮೇಲೆ ದಾಳಿ ನಡೆಸಿದ ವರದಿಯಾಗಿದೆ. ಉತ್ತರ ದಿನಾಜ್‌ಪುರದಲ್ಲಿ ಇಬ್ಬರ ಮೇಲೆ ಗುಂಡು ಹಾರಿಸಲಾಗಿದೆ. ವಾಹನಗಳನ್ನು ಅಪಹರಿಸಲಾಗಿದೆ. ಇದನ್ನು ಖಂಡಿಸಿ, ಬಿಜೆಪಿ, ಕಾಂಗ್ರೆಸ್ ಹಾಗೂ ಸಿ‌ಪಿಎಂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಚುನಾವಣೆ ವೇಳೆ ನಡೆದ ವ್ಯಾಪಕ ಹಿಂಸಾಚಾರಕ್ಕೆ 20 ಮಂದಿ ಬಲಿಯಾಗಿದ್ದರು. ನೂರಾರು ಮಂದಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT