ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯನ್‌ ಗೇಮ್ಸ್‌ನಲ್ಲಿ ಕಠಿಣ ಸವಾಲಿರಲಿದೆ: ಸಿಕ್ಕಿ ರೆಡ್ಡಿ

Last Updated 17 ಮೇ 2018, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ‘ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ಹೋಲಿಸಿದರೆ ಏಷ್ಯನ್‌ ಗೇಮ್ಸ್‌ನಲ್ಲಿ ಕಠಿಣ ಸವಾಲು ಎದುರಾಗಲಿದೆ’ ಎಂದು ಭಾರತದ ಬ್ಯಾಡ್ಮಿಂಟನ್‌ ಆಟಗಾರ್ತಿ ಎನ್‌. ಸಿಕ್ಕಿ ರೆಡ್ಡಿ ಹೇಳಿದ್ದಾರೆ.

‘ಏಷ್ಯನ್‌ ಗೇಮ್ಸ್‌ನಲ್ಲಿ ಸ್ಪರ್ಧಿಸುವ ಆಟಗಾರ್ತಿಯರ ಸವಾಲು ಎದುರಿಸುವುದು ಸುಲಭವಲ್ಲ. ಜಪಾನ್‌ ಹಾಗೂ ಚೀನಾದ ಆಟಗಾರ್ತಿಯರು ಎದುರಾಳಿಯನ್ನು ಕಟ್ಟಿಹಾಕುವ ಸಾಮರ್ಥ್ಯ ಹೊಂದಿದ್ದಾರೆ. ಅವರನ್ನು ಸೋಲಿಸದೇ ಪದಕ ಗೆಲ್ಲುವುದು ಅಸಾಧ್ಯ. ನಮ್ಮ ಸಾಮರ್ಥ್ಯ ಮೀರಿ ಆಟವಾಡಿದರೆ ಮಾತ್ರ ಯಶಸ್ಸು ಸಾಧ್ಯ’ ಎಂದು ಅವರು ಹೇಳಿದ್ದಾರೆ.

ಅರ್ಜುನ ಪ್ರಶಸ್ತಿಗೆ ತಮ್ಮ ಹೆಸರನ್ನು ಶಿಫಾರಸು ಮಾಡಿರುವ ಬಗ್ಗೆ ಮಾತನಾಡಿದ ಅವರು, ‘ಈ ಸಲ ಅಷ್ಟು ದೊಡ್ಡ ಪ್ರಶಸ್ತಿ ನನಗೆ ಸಿಗುವ ನಿರೀಕ್ಷೆ ಇದೆ. ಕಳೆದ ವರ್ಷ ಕೂಡನನ್ನ ಹೆಸರನ್ನು ಶಿಫಾರಸು ಮಾಡಿಲಾಗಿತ್ತು. ಆ ಗೌರವಕ್ಕೆ ಭಾಜನಳಾಗುವ ಅರ್ಹತೆ ನನಗಿದೆ’ ಎಂದು ತಿಳಿಸಿದ್ದಾರೆ.

‘ಮೊದಲನೇ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿಯೇ ಪದಕಗಳನ್ನು ಗೆದ್ದೆ. ಇದರಿಂದ ಆತ್ಮವಿಶ್ವಾಸ ಹೆಚ್ಚಿದೆ. ತಂಡ ವಿಭಾಗದಲ್ಲಿ ಚಿನ್ನದ ಸಾಧನೆ ಮಾಡಿದ್ದು, ಡಬಲ್ಸ್‌ ಹಾಗೂ ಮಿಶ್ರ ಡಬಲ್ಸ್‌ ವಿಭಾಗದಲ್ಲಿ ಕ್ರಮವಾಗಿ ಆಶ್ವಿನಿ ಪೊನ್ನಪ್ಪ ಹಾಗೂ ಪ್ರಣವ್‌ ಜೆರಿ ಚೋಪ್ರಾ ಅವರೊಂದಿಗೆ ಆಡಿದ ಅನುಭವ ಅನನ್ಯವಾಗಿತ್ತು’ ಎಂದು ಅವರು ತಿಳಿಸಿದ್ದಾರೆ.

ವಿಶ್ವ ರ‍್ಯಾಂಕಿಂಗ್‌ ಪಟ್ಟಿಯ ಡಬಲ್ಸ್‌ ವಿಭಾಗದಲ್ಲಿ ಸಿಕ್ಕಿ ಹಾಗೂ ಅಶ್ವಿನಿ ಅವರು 25ನೇ ಸ್ಥಾನದಲ್ಲಿದ್ದಾರೆ. ಮಿಶ್ರಡಬಲ್ಸ್‌ ವಿಭಾಗದಲ್ಲಿ ಪ್ರಣವ್‌
ಹಾಗೂ ಸಿಕ್ಕಿ 24ನೇ ಸ್ಥಾನ ಹೊಂದಿದ್ದಾರೆ.

ಇತ್ತೀಚೆಗೆ ಗೋಲ್ಡ್‌ ಕೋಸ್ಟ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಸಿಕ್ಕಿ ಅವರು ಮಿಶ್ರ ತಂಡ ವಿಭಾಗದಲ್ಲಿ ಚಿನ್ನ ಹಾಗೂ ಡಬಲ್ಸ್‌
ವಿಭಾಗದಲ್ಲಿ ಕಂಚಿನ ಪದಕದ ಸಾಧನೆ ಮಾಡಿದ್ದರು.

ಇಂಡೋನೇಷ್ಯಾದಲ್ಲಿ  ಆಗಸ್ಟ್‌ 18ರಿಂದ ಸೆಪ್ಟೆಂಬರ್‌ 2ರವರೆಗೆ ಏಷ್ಯನ್‌ ಗೇಮ್ಸ್‌ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT