ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘2 ದಿನಗಳಲ್ಲಿ ರೈತರ ಸಾಲ ಮನ್ನಾ: ಯಡಿಯೂರಪ್ಪ ಭರವಸೆ

Last Updated 17 ಮೇ 2018, 19:36 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಷ್ಟ್ರೀಕೃತ ಬ್ಯಾಂಕ್‌ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ₹1 ಲಕ್ಷದವರೆಗಿನ ಬೆಳೆ ಸಾಲ ಮನ್ನಾ ಮಾಡುವ ಬಗ್ಗೆ ಒಂದೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಏಕಾಂಗಿಯಾಗಿ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸಂಬಂಧ ಮುಖ್ಯ ಕಾರ್ಯದರ್ಶಿ ಜತೆಗೆ ಸಮಾಲೋಚನೆ ನಡೆಸಿದ್ದೇನೆ. ಎಷ್ಟು ರೈತರ ಸಾಲ ಮನ್ನಾ ಮಾಡಬೇಕಾಗುತ್ತದೆ ಹಾಗೂ ಅದಕ್ಕೆ ಆಗುವ ಆರ್ಥಿಕ ಹೊರೆ ಎಷ್ಟು ಎಂಬ ಬಗ್ಗೆ ಅಂಕಿ ಅಂಶಗಳನ್ನು ನೀಡುವಂತೆ ಸೂಚಿಸಿದ್ದೇನೆ. ಶುಕ್ರವಾರ ಬೆಳಿಗ್ಗೆಯೊಳಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ‌’ ಎಂದು ವಿವರಿಸಿದರು.

2013ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರದ ಸ್ವೀಕರಿಸಿದ ಕೂಡಲೇ ಸಿದ್ದರಾಮಯ್ಯ ಅವರು ‘ಅನ್ನಭಾಗ್ಯ ಯೋಜನೆ’ಯನ್ನು ಘೋಷಿಸಿದ್ದರು. ಅದೇ ರೀತಿ ಯಡಿಯೂರಪ್ಪ ಅವರೂ ಅಧಿಕಾರ ಸ್ವೀಕರಿಸಿದ ಕೂಡಲೇ ವಾಗ್ದಾನ ಈಡೇರಿಸುವ ನಿಟ್ಟಿನಲ್ಲಿ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದರು. ಸಾಲ ಮನ್ನಾ ಮಾಡಿದರೆ ₹35 ಸಾವಿರ ಕೋಟಿ ಆರ್ಥಿಕ ಹೊರೆ ಬೀಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಸಭೆ ಐದು ನಿಮಿಷಗಳಲ್ಲಿ ಮುಕ್ತಾಯಗೊಂಡಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT