ಶುಕ್ರವಾರ, ಫೆಬ್ರವರಿ 26, 2021
25 °C

ಕಲಬುರ್ಗಿ: ಸಿಮೆಂಟ್ ಲಾರಿ, ಟಿಪ್ಪರ್ ಮಧ್ಯೆ ಮುಖಾಮುಖಿ ಡಿಕ್ಕಿ- ಚಾಲಕ, ಕ್ಲೀನರ್‌ಗೆ ಗಂಭೀರ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಸಿಮೆಂಟ್ ಲಾರಿ, ಟಿಪ್ಪರ್ ಮಧ್ಯೆ ಮುಖಾಮುಖಿ ಡಿಕ್ಕಿ- ಚಾಲಕ, ಕ್ಲೀನರ್‌ಗೆ ಗಂಭೀರ ಗಾಯ

ಕಲಬುರ್ಗಿ: ಇಲ್ಲಿನ ಸೇಡಂ ರಸ್ತೆಯ ಖರ್ಗೆ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ಸಿಮೆಂಟ್ ಲಾರಿ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿವೆ.

ಡಿಕ್ಕಿಯ ರಭಸಕ್ಕೆ ನಡು ರಸ್ತೆಯಲ್ಲಿ ಲಾರಿ ಪಲ್ಟಿಯಾಗಿದ್ದು, ಸಿಮೆಂಟ್ ಚೀಲಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಟಿಪ್ಪರ್‌ ಚಾಲಕ ಮತ್ತು ಕ್ಲೀನರ್‌ಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಮಳಖೇಡದಿಂದ‌ ಆಳಂದ ತಾಲ್ಲೂಕು ಪಟ್ಟಣ ಗ್ರಾಮಕ್ಕೆ ತೆರಳುತ್ತಿತ್ತು. ಟಿಪ್ಪರ್ ಹುಮನಾಬಾದ್ ರಸ್ತೆ ಮಾರ್ಗವಾಗಿ ಜೇವರ್ಗಿ ಕಡೆ ಹೊರಟಿತ್ತು.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು. ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಕ್ಕಿಯ ರಭಸಕ್ಕೆ ಲಾರಿ ಪಲ್ಟಿಯಾಗಿ, ಸಿಮೆಂಟ್ ಚೀಲಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.