ಕಠುವಾ ಸಂತ್ರಸ್ತೆ ಗುರುತು ಬಹಿರಂಗ: ನಮಗೆ ಸಂಬಂಧಿಸಿದ ವಿಚಾರವಲ್ಲ ಎಂದ ಸಾಮಾಜಿಕ ಮಾಧ್ಯಮಗಳು

7

ಕಠುವಾ ಸಂತ್ರಸ್ತೆ ಗುರುತು ಬಹಿರಂಗ: ನಮಗೆ ಸಂಬಂಧಿಸಿದ ವಿಚಾರವಲ್ಲ ಎಂದ ಸಾಮಾಜಿಕ ಮಾಧ್ಯಮಗಳು

Published:
Updated:
ಕಠುವಾ ಸಂತ್ರಸ್ತೆ ಗುರುತು ಬಹಿರಂಗ: ನಮಗೆ ಸಂಬಂಧಿಸಿದ ವಿಚಾರವಲ್ಲ ಎಂದ ಸಾಮಾಜಿಕ ಮಾಧ್ಯಮಗಳು

ನವದೆಹಲಿ: ದೇಶದ ಗಮನ ಸೆಳೆದಿದ್ದ ಕಠುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಗೂಗಲ್‌, ಫೇಸ್‌ಬುಕ್‌, ಟ್ವಿಟರ್‌ ಸೇರಿದಂತೆ ಹಲವು ಸಾಮಾಜಿಕ ಮಾಧ್ಯಮ ಸಂಸ್ಥೆಗಳು ‘ಇದು ನಮಗೆ ಸಂಬಂಧಿಸಿದ ವಿಚಾರವಲ್ಲ’ ಎಂದು ಪ್ರತಿಕ್ರಿಯಿಸಿವೆ.

ಸಂತ್ರಸ್ತೆಯ ಗುರುತು ಬಹಿರಂಗ ಪಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಸಾಮಾಜಿಕ ಮಾಧ್ಯಮಗಳ ಭಾರತೀಯ ಅಂಗಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಿತ್ತು. ಹೈಕೋರ್ಟ್‌ಗೆ ಈ ಸಂಸ್ಥೆಗಳು ಮೇಲಿನಂತೆ ಪ್ರತಿಕ್ರಿಯಿಸಿವೆ.

ಪ್ರಕರಣದ ಮುಂದಿನ ವಿಚಾರಣೆ ಮೇ 29ರಂದು ನಡೆಯಲಿದೆ.

ಮಾಧ್ಯಮ ಸಂಸ್ಥೆಗಳಿಗೆ ದಂಡ ವಿಧಿಸಲಾಗಿತ್ತು

ಸಂತ್ರಸ್ತೆಯ ವೈಯಕ್ತಿಕ ವಿವರಗಳು ಬಹಿರಂಗವಾದದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ಸಿ.ಹರಿ ಶಂಕರ್ ಅವರಿದ್ದ ಪೀಠ, ಏಪ್ರಿಲ್‌ 17ರಂದು 12 ಮಾಧ್ಯಮ ಸಂಸ್ಥೆಗಳಿಗೆ ತಲಾ ₹ 10 ಲಕ್ಷ ದಂಡ ವಿಧಿಸಿತ್ತು.

ಏನಿದು ಕಠುವಾ ಪ್ರಕರಣ

ಜನವರಿ 10ರಂದು ಜಮ್ಮುವಿನ ಕಠುವಾ ಜಿಲ್ಲೆಯ ರಸಾನಾ ಗ್ರಾಮದ ಅಲೆಮಾರಿ ಜನಾಂಗಕ್ಕೆ ಸೇರಿದ ಎಂಟು ವರ್ಷದ ಬಾಲಕಿಯನ್ನು ಅಪಹರಿಸಿದ್ದ ದುಷ್ಕರ್ಮಿಗಳು ಏಳು ದಿನಗಳ ಕಾಲ ಅತ್ಯಾಚಾರವೆಸಗಿ, ಬಳಿಕ ಆಕೆಯನ್ನು ಕೊಲೆ ಮಾಡಿದ್ದರು.

ಒಂದು ವಾರದ ಬಳಿಕ ಕಾಡಿನಲ್ಲಿ ಬಾಲಕಿಯ ಶವ ಕಾಣಿಸಿಕೊಂಡ ನಂತರ ಪ್ರಕರಣ ಬೆಳಕಿಗೆ ಬಂದಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry