7

ಸುಪ್ರೀಂಕೋರ್ಟ್‌ ಆದೇಶ ಸ್ವಾಗತಾರ್ಹ: ನಿವೃತ್ತ ಲೋಕಾಯುಕ್ತ ಸಂತೋಷ್‌ ಹೆಗ್ಡೆ

Published:
Updated:
ಸುಪ್ರೀಂಕೋರ್ಟ್‌ ಆದೇಶ ಸ್ವಾಗತಾರ್ಹ: ನಿವೃತ್ತ ಲೋಕಾಯುಕ್ತ ಸಂತೋಷ್‌ ಹೆಗ್ಡೆ

ಮೈಸೂರು: ‘ಹೊಸ ಸರ್ಕಾರ ರಚನೆಗೆ ಸಂಬಂಧಿಸಿ ಶನಿವಾರ ಸಂಜೆ 4 ಗಂಟೆಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಶುಕ್ರವಾರ ಸುಪ್ರೀಂಕೊರ್ಟ್‌ ನೀಡಿರುವ ಆದೇಶ ಸ್ವಾಗತಾರ್ಹ’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚನೆಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು ಸರಿಯಾದ ನಿರ್ಧಾರ. ಆದರೆ ಬಹುಮತ ಸಾಬೀತುಪಡಿಸಲು 15 ದಿನಗಳ ಕಾಲಾವಕಾಶ ಕೊಟ್ಟಿದ್ದು ಖಂಡನೀಯ’ ಎಂದರು.

 ರಾಜ್ಯಪಾಲರು ಮಾಡಿದ ತಪ್ಪನ್ನು ಸುಪ್ರೀಂಕೋರ್ಟ್‌ ಸರಿ ಮಾಡಿದೆ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry