ಮನೆಯಂಗಳದಲ್ಲಿ ಯಲ್ಲಪ್ಪರೆಡ್ಡಿ

7

ಮನೆಯಂಗಳದಲ್ಲಿ ಯಲ್ಲಪ್ಪರೆಡ್ಡಿ

Published:
Updated:
ಮನೆಯಂಗಳದಲ್ಲಿ ಯಲ್ಲಪ್ಪರೆಡ್ಡಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜೆ.ಸಿ.ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಶನಿವಾರ (ಮೇ 19) ಸಂಜೆ 4 ಗಂಟೆ ಆಯೋಜಿಸಿರುವ ‘ಮನೆಯಂಗಳದಲ್ಲಿ ಮಾತುಕತೆ’ ತಿಂಗಳ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪರಿಸರವಾದಿ ಡಾ.ಅ.ನ. ಯಲ್ಲಪ್ಪರೆಡ್ಡಿ ಪಾಲ್ಗೊಳ್ಳುವರು.

ಪರಿಸರದ ಬಗ್ಗೆ ಅಪಾರ ಜ್ಞಾನವುಳ್ಳ ಯಲ್ಲಪ್ಪರೆಡ್ಡಿ ಅವರು ರಾಜ್ಯದಲ್ಲಿ ಅರಣ್ಯ ಸಂರಕ್ಷಣೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ ಭಾರತೀಯ ಅರಣ್ಯ ಸೇವೆಯ ನಿವೃತ್ತ ಅಧಿಕಾರಿ.

ಅರಣ್ಯೀಕರಣ ಕುರಿತು ಅನೇಕ ರಾಜ್ಯ ಮತ್ತು ರಾಷ್ಟ್ರಮಟ್ಟದ ಉನ್ನತ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸಿರುವ ಅವರು, ಬೆಂಗಳೂರು ಸೇರಿದಂತೆ ಪ್ರಮುಖ ಪಟ್ಟಣ ಪ್ರದೇಶಗಳಲ್ಲಿ ಹಲವು ಉದ್ಯಾನಗಳ ಆರಂಭಕ್ಕೆ ಕಾರಣಕರ್ತರು.

ಪರಿಸರದ ಸಮತೋಲನದ ಬಗ್ಗೆ ಜನರಿಗೆ ಅರಿವು ಮೂಡಿಸುವ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದ್ದಾರೆ. ಅರಣ್ಯಗಳ ನಾಶದಿಂದ ಆಗುವ ದುಷ್ಪರಿಣಾಮಗಳನ್ನು ವಿವರಿಸುವ ಅನೇಕ ಬರಹ, ಕೃತಿಗಳನ್ನು ಅವರು ಹೊರತಂದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry