ಸೋಲು ಸವಾಲಾಗಿ ಸ್ವೀಕರಿಸಿ: ಆಸ್ಕರ್‌ ಫರ್ನಾಂಡಿಸ್‌ ಸಲಹೆ

7

ಸೋಲು ಸವಾಲಾಗಿ ಸ್ವೀಕರಿಸಿ: ಆಸ್ಕರ್‌ ಫರ್ನಾಂಡಿಸ್‌ ಸಲಹೆ

Published:
Updated:

ಉಡುಪಿ: ರಾಜ್ಯಪಾಲ ವಜೂಭಾಯ್‌ ವಾಲಾ ಅವರು ಪೂರ್ಣ ಬಹುಮತವಿಲ್ಲದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವುದು ಸಂವಿಧಾನಕ್ಕೆ ವಿರುದ್ಧ ನಿರ್ಧಾರ ಎಂದು ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ಆರೋಪ ಮಾಡಿದರು.

ಜಿಲ್ಲಾ ಕಾಂಗ್ರೆಸ್‌ ಘಟಕವು ಗುರುವಾರ ಆಯೋಜಿಸಿದ್ದ ಕಾರ್ಯಕರ್ತರ ಕೃತಜ್ಞತಾ ಸಮರ್ಪಣಾ ಸಭೆಯಲ್ಲಿ ಮಾತನಾಡಿದರು.

ಸೋಲನ್ನು ಸವಾಲಾಗಿ ಸ್ವೀಕರಿಸಿ, ಮುಂದಿನ ದಿನಗಳಲ್ಲಿ ಬರುವ ಶಿಕ್ಷಕರ, ಪದವೀಧರ ಕ್ಷೇತ್ರದ ಹಾಗೂ ನಗರಸಭಾ ಚುನಾವಣೆಗಳಲ್ಲಿ ಕಾರ್ಯಕರ್ತರು ಎಲ್ಲರೂ ಸಂಘಟಿತರಾಗಿ ಪಕ್ಷ ಮುನ್ನಡೆಸಬೇಕು ಎಂದು ಅವರು ಹೇಳಿದರು.

ಮಾಜಿ ಶಾಸಕ ವಿನಯ ಕುಮಾರ ಸೊರಕೆ ಮಾತನಾಡಿ, ಕರಾವಳಿಯ ಕಾಂಗ್ರೆಸ್‌ ಪಕ್ಷದ ಎಲ್ಲ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದಾರೆ. ಆದರೆ, ಬಿಜೆಪಿ ನಿರಂತರ ಅಪಪ್ರಚಾರದಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. ಜನತೆಗೆ ಶೀಘ್ರ ವಾಸ್ತತೆ ಅರಿವಾಗಲಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲವನ್ನು ಸೂಚಿಸಲಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಸಭೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಎಂ. ಎ. ಗಪೂರ್, ಮಾಜಿ ಶಾಸಕ ಯು. ಆರ್ ಸಭಾಪತಿ, ಗೀತಾ ವಾಗ್ಳೆ, ವೆರೋನಿಕಾ ಕರ್ನೇಲಿಯೋ, ದಿನೇಶ್ ಪುತ್ರನ್, ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕಾಪು ದಿವಾಕರ ಶೆಟ್ಟಿ, ದೇವಿ ಪ್ರಸಾದ್ ಶೆಟ್ಟಿ, ದಿವಾಕರ ಕುಂದರ್, ಗಣೇಶ್ ಕೋಟ್ಯಾನ್, ಕೃಷ್ಣರಾಜ ಸರಳಾಯ, ಸರಳಾ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ, ಮುರಳಿ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಸಂಪಿಗೇಡಿ ಸಂಜೀವ ಶೆಟ್ಟಿ, ಸುಧಾಕರ ಕೋಟ್ಯಾನ್, ನವೀನ್‌ಚಂದ್ರ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಜನಾರ್ದನ ಭಂಡಾ ರ್ಕಾರ್, ಹರೀಶ್ ಶೆಟ್ಟಿ ಪಾಂಗಳ, ಡಾ. ಸುನಿತಾ ಶೆಟ್ಟಿ, ಮಲ್ಲಿಕಾ ಪೂಜಾರಿ, ಬಾಲಕೃಷ್ಣ ಪೂಜಾರಿ ಇದ್ದರು.

ಬಿ. ನರಸಿಂಹ ಮೂರ್ತಿ ಕಾರ್ಯಕ್ರಮ ನಿರ್ವಹಿಸಿ, ಕಾರ್ಯದರ್ಶಿ ಹರೀಶ್ ಕಿಣಿ ಧನ್ಯವಾದ ಸಲ್ಲಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry