ರಾಜ್ಯಪಾಲರ ಕ್ರಮ ಖಂಡನೀಯ

7
ಶಾಸ್ತ್ರಿ ಚೌಕ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ರಾಜ್ಯಪಾಲರ ಕ್ರಮ ಖಂಡನೀಯ

Published:
Updated:

ಯಾದಗಿರಿ: ಬಿಜೆಪಿಗೆ ಬಹುಮತ ಇಲ್ಲದಿದ್ದರೂ ಸರ್ಕಾರ ರಚನೆಗೆ ಅವಕಾಶ ನೀಡಿರುವ ರಾಜ್ಯಪಾಲರ ಕ್ರಮವನ್ನು ವಿರೋಧಿಸಿ ಶುಕ್ರವಾರ ನಗರದ ಶಾಸ್ತ್ರಿ ಚೌಕ್‌ನಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಂವಿಧಾನಿಕ ಹುದ್ದೆಯಲ್ಲಿ ಇರುವ ರಾಜ್ಯಪಾಲರು ಬಹುಮತವಿರುವ ಮೈತ್ರಿಕೂಟಕ್ಕೆ ಅವಕಾಶ ನೀಡಬೇಕಾಗಿತ್ತು. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈಗೊಂಬೆಯಂತೆ ವರ್ತಿಸಿ ರಾತ್ರೋರಾತ್ರಿ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವುದು ಸರಿಯಲ್ಲ. ರಾಜ್ಯಪಾಲರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

ಮುಖಂಡರಾದ ಚೆನ್ನಾರಡ್ಡಿ ಪಾಟೀಲ್ ತುನ್ನೂರ, ಶ್ರೀನಿವಾಸರಡ್ಡಿ ಕಂದಕೂರ, ರಾಘವೇಂದ್ರ ಮಾನಸಗಲ್, ರಾಜಶೇಖರ ಪಾಟೀಲ್, ಹಾಜಿ ಸಮಸುದ್ ಜಮ್, ಮಹಿಪಾಲರಡ್ಡಿ ಹತ್ತಿಕುಣಿ, ಚಿದಾನಂದಪ್ಪ ಕಾಳಬೆಳಗುಂದಿ, ಶರಣಪ್ಪ, ಸುರೇಶ ಜೈನ್, ವಿಜಯಲಕ್ಷ್ಮಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry