ಮಂಗಳವಾರ, ಮಾರ್ಚ್ 9, 2021
18 °C

ವಿಶ್ವಾಸಮತ ಗೆಲ್ಲುವುದು ಅನುಮಾನ: ರಾಜೀನಾಮೆಗೆ ಯಡಿಯೂರಪ್ಪ ಸಿದ್ಧತೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಶ್ವಾಸಮತ ಗೆಲ್ಲುವುದು ಅನುಮಾನ: ರಾಜೀನಾಮೆಗೆ ಯಡಿಯೂರಪ್ಪ ಸಿದ್ಧತೆ?

ಬೆಂಗಳೂರು: ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವ ಸಾಧ್ಯತೆ ದೂರವಾಗುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂಬ ವದಂತಿ ವಿಧಾನಸೌಧದಲ್ಲಿ ದಟ್ಟವಾಗಿ ಹರಡಿದೆ.

ತವರು ಜಿಲ್ಲೆ ಶಿವಮೊಗ್ಗದಲ್ಲಿ ಸೂತಕದ ಛಾಯೆ ಕಾಣಿಸಿಕೊಂಡಿದೆ. ವಿಶ್ವಾಸ ಮತ ಗೆಲುವಿಗೆ ಪ್ರಾರ್ಥಿಸಿ ಬೆಳಿಗ್ಗೆ ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದ ಅಭಿಮಾನಿಗಳು ಪಕ್ಷದ ಕಾರ್ಯಕರ್ತರಲ್ಲಿ ಆತಂಕ ಮೂಡಿದೆ.

ವಿಧಾನಸಭೆಯಲ್ಲಿ ಭಾವನಾತ್ಮಕವಾಗಿ ಭಾಷಣ ಮಾಡಿದ ನಂತರ  ಯಡಿಯೂರಪ್ಪ ಅವರು ಎಲ್ಲ ಶಾಸಕರೊಡನೆ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

1996ರಲ್ಲಿ ವಾಜಪೇಯಿ ಅವರು ಮಾಡಿದ್ದಂತೆ ಯಡಿಯೂರಪ್ಪ ಸಹ ವಿಶ್ವಾಸಮತ ಯಾಚಿಸುವ ಮೊದಲೇ ರಾಜೀನಾಮೆ ನೀಡಬಹುದು ಎಂದು ಮೂಲಗಳು ಹೇಳಿವೆ.

ಸಭಾಧ್ಯಕ್ಷರು ಯಡಿಯೂರಪ್ಪ ಅವರ ಭಾಷಣಕ್ಕೆ ಅವಕಾಶ ಮಾಡಿಕೊಟ್ಟರೆ ಯಡಿಯೂರಪ್ಪ ಅವರು ಸಹಜವಾಗಿಯೇ ಜೆಡಿಎಸ್-ಕಾಂಗ್ರೆಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ವಾಗ್ದಾಳಿ ಮಾಡಲಿದ್ದಾರೆ. ಇದು ಸದನದಲ್ಲಿ ಗದ್ದಲಕ್ಕೆ ಕಾರಣವಾಗಲಿದೆ. ಯಡಿಯೂರಪ್ಪ ಅವರು ಒಂದು ಗಂಟೆ ಅವಧಿಯ ಭಾಷಣ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.