ಶನಿವಾರ, ಫೆಬ್ರವರಿ 27, 2021
31 °C

ಎಲೆ ಅಡಿಕೆ‌ ಉಗಿದು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಲೆ ಅಡಿಕೆ‌ ಉಗಿದು ಪ್ರತಿಭಟನೆ

ಚನ್ನಪಟ್ಟಣ: ಬಹುಮತ ಇಲ್ಲದಿದ್ದರೂ ಸರ್ಕಾರ ರಚಿಸಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿ ಕೇಂದ್ರ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಎಲೆ ಅಡಿಕೆ ಉಗಿಯುವ ಪ್ರತಿಭಟನೆ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಹಮ್ಮಿಕೊಂಡಿದ್ದರು. ರಾಜ್ಯಪಾಲ ವಜುಬಾಯಿ ವಾಲಾ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರ ಭಾವಚಿತ್ರಗಳನ್ನು ಇಡಲಾಗಿತ್ತು. ಪ್ರತಿಭಟನಾಕಾರರು ಸರ್ಕಾರ ಹಾಗೂ ರಾಜ್ಯಪಾಲರ ಕ್ರಮ ಖಂಡಿಸಿದರು.

ಸಂಘಟನೆಯ ಸಂಚಾಲಕ ಪಿ.ಜೆ. ಗೋವಿಂದರಾಜು ಮಾತನಾಡಿ, ಜವಾಬ್ದಾರಿಯುತ ಹುದ್ದೆಯಲ್ಲಿರುವ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಾ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಹಾಗೆಯೆ ಇದಕ್ಕೆ ಕೇಂದ್ರ ಸರ್ಕಾರ ಕರ್ನಾಟಕದ ರಾಜಕಾರಣವನ್ನು ಬುಡಮೇಲು ಮಾಡಲು ಹೊರಟಿದ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.