ಶುಕ್ರವಾರ, ಫೆಬ್ರವರಿ 26, 2021
31 °C

‘ದೇಶಕ್ಕಿಂತ ಮೋದಿ ದೊಡ್ಡವರಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ದೇಶಕ್ಕಿಂತ ಮೋದಿ ದೊಡ್ಡವರಲ್ಲ’

ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಈ ದೇಶಕ್ಕಿಂತ ದೊಡ್ಡವರಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕರ್ನಾಟಕ ರವಾನಿಸಿದೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೂ ಇದೊಂದು ಬಹು ದೊಡ್ಡ ಪಾಠಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಬಣ್ಣಿಸಿದ್ದಾರೆ.

ರಾಷ್ಟ್ರಗೀತೆಯ ಮಧ್ಯದಲ್ಲಿಯೇ ಬಿಜೆಪಿ ಶಾಸಕರು, ಸ್ಪೀಕರ್‌ ಸದನದಿಂದ ಹೊರನಡೆಯುವ ಮೂಲಕ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ; ಬಿಜೆಪಿ ಶಾಸಕರ ಈ ವರ್ತನೆಯನ್ನು ಇಡೀ ದೇಶವೇ ಗಮನಿಸಿದೆ ಎಂದು ರಾಹುಲ್‌ ಹೇಳಿದ್ದಾರೆ.

ಶಾಸಕರ ಖರೀದಿಗೆ ಸೂಚನೆ ನೀಡುವ ಮೂಲಕ ಪ್ರಧಾನಿ ಮೋದಿ ಅವರು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ರಾಹುಲ್‌ ವಾಗ್ದಾಳಿ

ನಡೆಸಿದ್ದಾರೆ.

ಕಾಂಗ್ರೆಸ್ ಬಣ್ಣನೆ: ಶತಾಯಗತಾಯ ಅಧಿಕಾರ ಹಿಡಿಯಲು ವಿರೋಧ ಪಕ್ಷಗಳ ಶಾಸಕರಿಗೆ ಗಾಳ ಹಾಕಿದ ಬಿಜೆಪಿಯ ‘ಆಪರೇಷನ್‌ ಕಮಲ’ ವಿಫಲವಾಗಿದೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವಕ್ಕೆ ಗೆಲುವಾಗಿದೆ ಎಂದು ಕಾಂಗ್ರೆಸ್‌ ಬಣ್ಣಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.