ಡಿಸಿಎಂ ಹುದ್ದೆಗೆ ಲಾಬಿ

7

ಡಿಸಿಎಂ ಹುದ್ದೆಗೆ ಲಾಬಿ

Published:
Updated:

ಬೆಂಗಳೂರು: ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ವೀರಶೈವ–ಲಿಂಗಾಯತ ಸಮುದಾಯಕ್ಕೆ ಸೇರಿದ ಹಿರಿಯ ಶಾಸಕರೊಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್‌ನಲ್ಲಿರುವ ವೀರಶೈವ– ಲಿಂಗಾಯತ ಮುಖಂಡರು ಒತ್ತಡ ಹೇರಿದ್ದಾರೆ.

ಕಾಂಗ್ರೆಸ್ ಈಗಾಗಲೇ ದಲಿತ ಸಮುದಾಯಕ್ಕೆ ಸೇರಿದ ಜಿ.ಪರಮೇಶ್ವರ ಅವರನ್ನು ಉಪಮುಖ್ಯಮಂತ್ರಿ ಮಾಡಲು ತೀರ್ಮಾನಿಸಿದೆ. ಲಿಂಗಾಯತ– ವೀರಶೈವರಿಗಾಗಿ ಇನ್ನೊಂದು ಉಪಮುಖ್ಯಮಂತ್ರಿ ಸ್ಥಾನವನ್ನು ಸೃಷ್ಟಿಸಬೇಕು ಎಂದು ಹೈಕಮಾಂಡನ್ನು ಆಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಬಿಜೆಪಿ ಲಿಂಗಾಯತ ಸಮುದಾಯಕ್ಕೆ ಸೇರಿದ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಅಂತಹ ಸಂದರ್ಭದಲ್ಲೂ ಸಮುದಾಯದ ಶಾಸಕರು ಪಕ್ಷ ನಿಷ್ಠೆ ಮೆರೆದಿದ್ದಾರೆ. ಆದ್ದರಿಂದ, ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಕಾಂಗ್ರೆಸ್‌ ಮುಖಂಡರೊಬ್ಬರು ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ಶಾಸಕರಾದ ಶಾಮನೂರು ಶಿವಶಂಕರಪ್ಪ, ಬಿ.ಸಿ.ಪಾಟೀಲ ಮತ್ತು ರಾಜಶೇಖರ ಪಾಟೀಲ ಹುಮ್ನಾಬಾದ್‌ ಅವರನ್ನು ಸೆಳೆಯಲು ಬಿಜೆಪಿ ಸಾಕಷ್ಟು ಪ್ರಯತ್ನ ನಡೆಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry