ಆರ್‌.ಆರ್‌.ನಗರ, ಜಯನಗರ ಕ್ಷೇತ್ರ: ಕಾಂಗ್ರೆಸ್‌– ಜೆಡಿಎಸ್ ಹೊಂದಾಣಿಕೆ

7

ಆರ್‌.ಆರ್‌.ನಗರ, ಜಯನಗರ ಕ್ಷೇತ್ರ: ಕಾಂಗ್ರೆಸ್‌– ಜೆಡಿಎಸ್ ಹೊಂದಾಣಿಕೆ

Published:
Updated:

ಬೆಂಗಳೂರು: ಸದ್ಯದಲ್ಲೇ ನಡೆಯುವ ರಾಜರಾಜೇಶ್ವರಿ ನಗರ ಮತ್ತು ಜಯನಗರ ವಿಧಾನಸಭಾ ಚುನಾವಣೆಗಳಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಹೊಂದಾಣಿಕೆಯ ಮೂಲಕ ಎರಡೂ ಸ್ಥಾನಗಳನ್ನು ಗೆಲ್ಲಲು ತೀರ್ಮಾನಿಸಿವೆ.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ರಾಮಚಂದ್ರ ಮತ್ತು ಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರನ್ನು ಗೆಲ್ಲಿಸಲು ಎರಡೂ ಪಕ್ಷಗಳು ಒಮ್ಮತಕ್ಕೆ ಬಂದಿವೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿವೆ. ಬಳ್ಳಾರಿ ಮತ್ತು ಶಿವಮೊಗ್ಗ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟು ಮಂಡ್ಯವನ್ನು ಜೆಡಿಎಸ್‌ ಉಳಿಸಿಕೊಳ್ಳಲು ನಿರ್ಧರಿಸಿದೆ. ಈ ರೀತಿ ಮಾಡುವುದರಿಂದ ಮೂರು ಸ್ಥಾನಗಳನ್ನು ಬುಟ್ಟಿಗೆ ಹಾಕಿಕೊಳ್ಳಬಹುದು ಎಂಬ ಲೆಕ್ಕಾಚಾರ ಮೈತ್ರಿಕೂಟದ್ದು.

ಅಲ್ಲದೆ, 2019ರಲ್ಲೂ ಹೊಂದಾಣಿಕೆ ಮಾಡಿಕೊಂಡರೆ ಅತ್ಯಧಿಕ ಸ್ಥಾನ ಗಳಿಸಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry