ಜೆಡಿಎಸ್ ಕಾರ್ಯಕರ್ತರ ಸಂಭ್ರಮ

7

ಜೆಡಿಎಸ್ ಕಾರ್ಯಕರ್ತರ ಸಂಭ್ರಮ

Published:
Updated:
ಜೆಡಿಎಸ್ ಕಾರ್ಯಕರ್ತರ ಸಂಭ್ರಮ

ರಾಮನಗರ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ಖಚಿತವಾಗುತ್ತಿದ್ದಂತೆ ನಗರದಲ್ಲಿ ಪಕ್ಷದ ಕಾರ್ಯಕರ್ತರು ಶನಿವಾರ ಸಂಭ್ರಮಾಚರಣೆ ಮಾಡಿದರು.

ಮುಖ್ಯಮಂತ್ರಿ ಯಡಿಯೂರಪ್ಪ ವಿಧಾನ ಸಭೆಯಲ್ಲಿ ರಾಜೀನಾಮೆ ಪ್ರಕಟಿಸುತ್ತಿದ್ದಂತೆಯೇ ಇಲ್ಲಿನ ಐಜೂರು ವೃತ್ತದಲ್ಲಿ ಜೆಡಿಎಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು.

ಬಹುಮತ ಇಲ್ಲದೆಯೇ ಸರ್ಕಾರ ರಚಿಸ ಹೊರಟ ಬಿಜೆಪಿ ಕ್ರಮವನ್ನು ಖಂಡಿಸಿದರು.

‘ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ’ ಎನ್ನುತ್ತಾ ಜೆಡಿಎಸ್ ಪರ ಜೈಕಾರ ಕೂಗಿದರು.

ಕೆಂಪೇಗೌಡ ವೃತ್ತದಲ್ಲಿ ಆಗಾಗ್ಗೆ ಪಟಾಕಿ ಸಿಡಿಯತ್ತಲೇ ಇತ್ತು.

ಅಲ್ಲಲ್ಲಿ ಕಾರ್ಯಕರ್ತರು ಸಿಡಿಮದ್ದು ಸಿಡಿಸಿ ಸಂಭ್ರಮಿಸಿದರು. ಕೆಲವೆಡೆ ಪಕ್ಷದ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry