3

ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿದ ಎಚ್‌ಡಿಕೆ

Published:
Updated:
ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿದ ಎಚ್‌ಡಿಕೆ

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಶನಿವಾರ ರಾತ್ರಿ ಭೇಟಿ ನೀಡಿ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ನಂತರ ಪಕ್ಷದ ರಾಷ್ಟ್ರೀಯ ವರಿಷ್ಠ ಹಾಗೂ ತಮ್ಮ ತಂದೆ ಎಚ್‌.ಡಿ. ದೇವೇಗೌಡ ಅವರನ್ನು ಪದ್ಮನಾಭ ನಗರದ ಮನೆಯಲ್ಲಿ ಭೇಟಿ ಮಾಡಿದರು.

ಕುಮಾರಸ್ವಾಮಿ ಭಾನುವಾರ ಬೆಳಿಗ್ಗೆ ದೆಹಲಿಗೆ ತೆರಳಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry