ಕೊಪ್ಪಳದಲ್ಲಿ ಮುಂಜಾನೆ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಕೊಪ್ಪಳ: ಜಿಲ್ಲೆಯ ಹಲವೆಡೆ ಭಾನುವಾರ ನಸುಕಿನಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಕೊಪ್ಪಳ ನಗರದ ಹಲವೆಡೆ ಮಳೆಯಿಂದಾಗಿ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ನಗರದ ಗಡಿಯಾರ ಕಂಬದ ಬಳಿ ಕಾಂಪ್ಲೆಕ್ಸ್ಗೆ ನೀರು ನುಗ್ಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ.
ಹಲವು ಅಂಗಡಿಗಳಿಗೆ ನೀರು ನುಗ್ಗಿದ್ದು, ಬಹುತೇಕ ವಸ್ತುಗಳು ನೀರಿನಲ್ಲಿ ಮುಳುವೆ. ನಗರಸಭೆ ಅಧಿಕಾರಿಗಳ ವಿರುದ್ಧ ಬಾಡಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.