ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಲಿರುವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ 24 ಗಂಟೆಗಳಲ್ಲಿಯೇ ವಿಶ್ವಾಸಮತ ಸಾಬೀತುಪಡಿಸುತ್ತೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು ನಾಳೆ ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದು, ಸರ್ಕಾರ ರಚನೆ ಹಾಗೂ ಮಂತ್ರಿಮಂಡಲ ಕುರಿತು ಚರ್ಚೆ ನಡೆಸಲಿದ್ದೇನೆ. ಜತೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಲಿದ್ದೇನೆ ಎಂದು ತಿಳಿಸಿದರು.
ಇಂದು ಬೆಳಿಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ. ನಂತರ ತಮಿಳುನಾಡಿನ ತಿರುಚ್ಚಿಯ ಶ್ರೀರಂಗಂ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನಾಳೆ ಬೆಳಗ್ಗೆ ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.