‘ಪಂದ್ಯ ಬದಲಿಸಿದ ಪ್ರಸಿದ್ಧ ಕೃಷ್ಣ ಬೌಲಿಂಗ್‌’

7

‘ಪಂದ್ಯ ಬದಲಿಸಿದ ಪ್ರಸಿದ್ಧ ಕೃಷ್ಣ ಬೌಲಿಂಗ್‌’

Published:
Updated:
‘ಪಂದ್ಯ ಬದಲಿಸಿದ ಪ್ರಸಿದ್ಧ ಕೃಷ್ಣ ಬೌಲಿಂಗ್‌’

ಹೈದರಾಬಾದ್‌: ‘ಇನಿಂಗ್ಸ್‌ನ ಕೊನೆಯಲ್ಲಿ ಪ್ರಸಿದ್ಧ ಕೃಷ್ಣ ಅವರ ಪರಿಣಾಮಕಾರಿ ಬೌಲಿಂಗ್‌ ಪಂದ್ಯದ ಗತಿ ಬದಲಿಸಿತು’ ಎಂದು ಕೋಲ್ಕತ್ತ ನೈಟ್‌ ರೈಡರ್ಸ್‌ (ಕೆಕೆಆರ್‌) ತಂಡದ ಬ್ಯಾಟ್ಸ್‌ಮನ್‌ ಶುಭಮನ್‌ ಗಿಲ್‌ ಹೇಳಿದರು.

ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್‌ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 172 ರನ್‌ ಗಳಿಸಿತು. ಗುರಿ ಬೆನ್ನತ್ತಿದ ಕೆಕೆಆರ್‌ ತಂಡವು 19.4 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 173 ರನ್‌ ಗಳಿಸಿ ಗೆದ್ದಿತು.

‘ಸನ್‌ರೈಸರ್ಸ್‌ ತಂಡದ ಬ್ಯಾಟ್ಸ್‌ಮನ್‌ಗಳು ಒಂದು ಹಂತದಲ್ಲಿ ಬೃಹತ್‌ ಮೊತ್ತ ಪೇರಿಸುವತ್ತ ಸಾಗಿದ್ದರು. ಆದರೆ, ಇನಿಂಗ್ಸ್‌ನ ಕೊನೆಯಲ್ಲಿ ಪ್ರಸಿದ್ಧ ಕೃಷ್ಣ ಅವರ ಬೌಲಿಂಗ್‌ ದಾಳಿಯು ಅವರನ್ನು ಕಟ್ಟಿಹಾಕಿತು. ಪ್ರಸಿದ್ಧ ಅವರೊಂದಿಗೆ ತಂಡದ ಸಹ ಬೌಲರ್‌ಗಳು ಉತ್ತಮ ಬೌಲಿಂಗ್‌ ಮಾಡಿದರು’ ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry