‘ಪ್ರಜಾಪ್ರಭುತ್ವಕ್ಕೆ ಕೊಲಿಜಿಯಂ ಕಪ್ಪುಚುಕ್ಕೆ’

7

‘ಪ್ರಜಾಪ್ರಭುತ್ವಕ್ಕೆ ಕೊಲಿಜಿಯಂ ಕಪ್ಪುಚುಕ್ಕೆ’

Published:
Updated:

ನವದೆಹಲಿ : ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯ ಮೂರ್ತಿಗಳನ್ನು ಆಯ್ಕೆ ಮಾಡುವ ಕೊಲಿಜಿಯಂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆಯಾಗಿದೆ ಎಂದು ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಟೀಕಿಸಿದ್ದಾರೆ.

ಕೊಲಿಜಿಯಂ ವ್ಯವಸ್ಥೆ ಮತ್ತು ಅದರಿಂದ ನಡೆಯುವ ನೇಮಕಾತಿಗಳು ಪಾರದರ್ಶಕವಾಗಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರತಿಭಾವಂತ ರಿಗೆ ಕೊಲಿಜಿಯಂ ಬಾಗಿಲು ಎಂದಿಗೂ ತೆರೆದಿಲ್ಲ ಎಂದು ಆರೋಪಿಸಿದ್ದಾರೆ.

ಸ್ವಜನ ಪಕ್ಷಪಾತದ ಕೊಲಿಜಿಯಂ ವ್ಯವಸ್ಥೆ ಬದಲಾಗಬೇಕಿದೆ. ನ್ಯಾಯಾಂಗದಲ್ಲಿ ದಲಿತರಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ನಿಷ್ಪಕ್ಷಪಾತವಾದ ಮತ್ತು ಪಾರದರ್ಶಕ ವ್ಯವಸ್ಥೆ ರೂಪಿಸಬೇಕಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry