ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಟಿನ್‌ರೊಂದಿಗೆ ಮಾತುಕತೆಗಾಗಿ ರಷ್ಯಾಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

Last Updated 21 ಮೇ 2018, 5:53 IST
ಅಕ್ಷರ ಗಾತ್ರ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ರೊಂದಿಗೆ ಮಾತುಕತೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಸೊಚಿ ನಗರಕ್ಕೆ ಸೋಮವಾರ ಬೆಳಿಗ್ಗೆ ಪ್ರಯಾಣ ಬೆಳೆಸಿದರು.

ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳು ಈ ಭೇಟಿಯಲ್ಲಿ ಚರ್ಚೆ ಆಗಲಿವೆ. ಅದರಲ್ಲಿ ಭಯೋತ್ಪಾದನೆ, ಅಫ್ಗಾನಿಸ್ತಾನ–ಪಾಕಿಸ್ತಾನ–ಸಿರಿಯಾದಲ್ಲಿನ ಪರಿಸ್ಥಿತಿ, ಇಸ್ಲಾಮಿಕ್‌ ಸ್ಟೇಟ್‌ ಉಗ್ರರ ಹಾವಳಿಯಂತ ವಿಷಯಗಳು ಸೇರಿವೆ.

‘ದೇಶಗಳ ಆರ್ಥಿಕ ಸುಧಾರಣೆಗೆ ಬೇಕಾದ ಪರಸ್ಪರ ಸಹಕಾರದ ಕುರಿತು ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ. ಇರಾನ್‌ ಮಾಡಿಕೊಳ್ಳಲು ಮುಂದಾಗಿರುವ ಅಣುಶಕ್ತಿ ಒಪ್ಪಂದ, ತೃತೀಯ ಜಗತ್ತಿನ ರಾಷ್ಟ್ರಗಳಿಗೆ ನೀಡಬೇಕಾದ ನಾಗರಿಕ ಪರಮಾಣು ಸಹಕಾರದ ಕುರಿತ ವಿಷಯಗಳು ಸಹ ಮಾತುಕತೆಯಲ್ಲಿ ಇರಲಿದೆ’ ಎಂದು ರಷ್ಯಾದಲ್ಲಿನ ಭಾರತದ ರಾಯಭಾರಿ ಪಂಕಜ್‌ ಶರನ್ ತಿಳಿಸಿದ್ದಾರೆ.

ಮೋದಿ ಅವರು ಈ ರಾಜತಾಂತ್ರಿಕ ಪ್ರವಾಸದಲ್ಲಿ ಶಾಂಘೈ ಸಹಕಾರ ಸಂಘಟನೆ, ಬ್ರಿಕ್ಸ್‌ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳನ್ನು ಬಲಪಡಿಸಲಿದ್ದಾರೆ.

ಮೋದಿ ಸೊಚಿ ನಗರಕ್ಕೆ ಬಂದಿಳಿದ ಬಳಿಕ ಅಲ್ಲಿನ ಸ್ಥಳೀಯಾಡಳಿತದ ಗಣ್ಯರು ಸ್ವಾಗತಿಸುವರು. ಅಲ್ಲಿಂದ ಅವರು ಅಧ್ಯಕ್ಷರ ಭವನಕ್ಕೆ ತೆರಳುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT