ದೇವೇಗೌಡರ ಮನೆಗೆ ಹಿರಿಯ ಅಧಿಕಾರಿಗಳ ದೌಡು

7
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ

ದೇವೇಗೌಡರ ಮನೆಗೆ ಹಿರಿಯ ಅಧಿಕಾರಿಗಳ ದೌಡು

Published:
Updated:
ದೇವೇಗೌಡರ ಮನೆಗೆ ಹಿರಿಯ ಅಧಿಕಾರಿಗಳ ದೌಡು

ಬೆಂಗಳೂರು: ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸುವುದು ಖಚಿತವಾಗುತ್ತಿದ್ದಂತೆ, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ರಾಜು, ಬೆಂಗಳೂರು ಪೊಲೀಸ್‌ ಕಮಿಷನರ್ ಟಿ.ಸುನೀಲ್‌ ಕುಮಾರ್‌, ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಲಕ್ಷ್ಮಿನಾರಾಯಣ ಭೇಟಿ ನೀಡಿ ಚರ್ಚೆ ನಡೆಸಿದರು.

ಅಧಿಕಾರಿಗಳು ಸಾಮಾನ್ಯವಾಗಿ ಮುಖ್ಯಮಂತ್ರಿ ಕಚೇರಿ ಅಥವಾ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸುತ್ತಾರೆ.

‘ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಮುನ್ನವೇ ಅಧಿಕಾರಿಗಳು ಗೌಡರ ಮನೆಗೆ ಓಡಿದ್ದಾರೆ. ಮಗ ಅಧಿಕಾರ ಸ್ವೀಕರಿಸುವ ಮೊದಲೇ ಸೂಪರ್‌ ಸಿ.ಎಂ ಹಕ್ಕು ಚಲಾಯಿಸಲು ಆರಂಭಿಸಿದ್ದಾರೆ. ಇನ್ನು ಮುಂದೆ ಅವರದ್ದೇ ಆಡಳಿತ’ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry