ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿಖ್ಖರಿಗೆ ವೀಸಾ ನಿರ್ಬಂಧಿಸಿದ್ದ ಕಪ್ಪುಪಟ್ಟಿ ರದ್ದು’

Last Updated 21 ಮೇ 2018, 19:34 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಖಲಿಸ್ತಾನ್‌ ಚಳವಳಿಯಲ್ಲಿ ಗುರುತಿಸಿಕೊಂಡಿದ್ದ ಆರೋಪ ಎದುರಿಸಿ ವಿದೇಶಗಳಲ್ಲಿ ನೆಲೆಸಿರುವ ಸಿಖ್ಖರಿಗೆ ಭಾರತದ ವೀಸಾ ನಿರ್ಬಂಧಿಸುವ ಸಂಬಂಧ ಸಿದ್ಧಪಡಿಸಲಾಗಿದ್ದ ಕಪ್ಪುಪಟ್ಟಿಯನ್ನು ಎನ್‌ಡಿಎ ಸರ್ಕಾರ ರದ್ದುಪಡಿಸಿದೆ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್ ಹೇಳಿದ್ದಾರೆ.

ಇಲ್ಲಿನ ಮೇರಿಲ್ಯಾಂಡ್‌ನಲ್ಲಿ ನಡೆದ ಸಿಖ್ಖರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಪ್ಪುಪಟ್ಟಿಯಲ್ಲಿ ಹೆಸರು ಇದ್ದವರು ಭಾರತ ಪ್ರವೇಶಿಸುವಂತಿಲ್ಲ ಎಂಬ ನಿರ್ಬಂಧ ಹೇರಿದ್ದರಿಂದ ಅಮೆರಿಕದಲ್ಲಿ ನೆಲೆಸಿರುವ ಸಿಖ್‌ ಸಮುದಾಯದಲ್ಲಿ ಅಸಮಾಧಾನ ಮೂಡಿತ್ತು’ ಎಂದರು.

‘1984ರಲ್ಲಿ ನಡೆದ ಸಿಖ್ಖರ ಹತ್ಯಾಕಾಂಡ ಪ್ರಕರಣಗಳ ಪ್ರಮುಖ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ. ಈ ಕ್ರಮದಿಂದ ತ್ವರಿತ ವಿಚಾರಣೆ ನಡೆದು, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಅನುಕೂಲವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT