ದಲಿತ ವ್ಯಕ್ತಿ ಹತ್ಯೆ ಪ್ರಕರಣ: ಗುಜರಾತ್ ಸರ್ಕಾರಕ್ಕೆ ಮಾನವ ಹಕ್ಕುಗಳ ಆಯೋಗ ನೋಟಿಸ್‌

7

ದಲಿತ ವ್ಯಕ್ತಿ ಹತ್ಯೆ ಪ್ರಕರಣ: ಗುಜರಾತ್ ಸರ್ಕಾರಕ್ಕೆ ಮಾನವ ಹಕ್ಕುಗಳ ಆಯೋಗ ನೋಟಿಸ್‌

Published:
Updated:
ದಲಿತ ವ್ಯಕ್ತಿ ಹತ್ಯೆ ಪ್ರಕರಣ: ಗುಜರಾತ್ ಸರ್ಕಾರಕ್ಕೆ ಮಾನವ ಹಕ್ಕುಗಳ ಆಯೋಗ ನೋಟಿಸ್‌

ರಾಜಕೋಟ್‌ (ಗುಜರಾತ್‌): ಚಿಂದಿ ಆಯುತ್ತಿದ್ದ ದಲಿತ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಹಲ್ಲೆ ನಡೆಸಿ ಕೊಂದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಗುಜರಾತ್ ಸರ್ಕಾರಕ್ಕೆ ಮಂಗಳವಾರ ನೋಟಿಸ್ ನೀಡಿದೆ.

ಇದೊಂದು ಗಂಭೀರ ಪ್ರಕರಣವಾಗಿದ್ದು, ನಾಲ್ಕು ವಾರಗಳಲ್ಲಿ ಘಟನೆ ಕುರಿತಂತೆ ವರದಿ ನೀಡುವಂತೆ ಮಾನವ ಹಕ್ಕುಗಳ ಆಯೋಗ ಗುಜರಾತ್ ಸರ್ಕಾರಕ್ಕೆ ಸೂಚಿಸಿದೆ.

 ಗುಜರಾತ್‌ ರಾಜ್ಯದಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದು ಕಳವಳಕಾರಿ ಎಂದು ಆಯೋಗ ಆತಂಕ ವ್ಯಕ್ತಪಡಿಸಿದೆ.

ಚಿಂದಿ ಆಯುತ್ತಿದ್ದ ಮುಕೇಶ ವಾನಿಯಾ (35) ಎಂಬ ವ್ಯಕ್ತಿಯ ಸೊಂಟಕ್ಕೆ ಹಗ್ಗ ಕಟ್ಟಿ ಒಬ್ಬಾತ ಹಿಡಿದುಕೊಂಡಿದ್ದರೆ ಉಳಿದವರು ಕೋಲಿನಿಂದ ಮನಸೋ ಇಚ್ಛೆ ಹೊಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೃತ ವ್ಯಕ್ತಿಯ ಪತ್ನಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ವೈರಲ್ ವಿಡಿಯೊ ಆಧಾರದ ಮೇಲೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry