ಕುಮಾರಸ್ವಾಮಿ ಪ್ರಮಾಣವಚನದಲ್ಲಿ ಭಾಗವಹಿಸದಂತೆ ಬಿಜೆಪಿ ಶಾಸಕರಿಗೆ ಸೂಚನೆ?

7

ಕುಮಾರಸ್ವಾಮಿ ಪ್ರಮಾಣವಚನದಲ್ಲಿ ಭಾಗವಹಿಸದಂತೆ ಬಿಜೆಪಿ ಶಾಸಕರಿಗೆ ಸೂಚನೆ?

Published:
Updated:
ಕುಮಾರಸ್ವಾಮಿ ಪ್ರಮಾಣವಚನದಲ್ಲಿ ಭಾಗವಹಿಸದಂತೆ ಬಿಜೆಪಿ ಶಾಸಕರಿಗೆ ಸೂಚನೆ?

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಬುಧವಾರ ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಭಾಗವಹಿಸದಂತೆ ಬಿಜೆಪಿ ಶಾಸಕರಿಗೆ, ನಾಯಕರಿಗೆ ಹೈಕಮಾಂಡ್‌ ಸೂಚಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿವಾಹಿನಿಗಳು ವರದಿ ಮಾಡಿವೆ.

‘ಪ್ರಮಾಣವಚನ ಸಮಾರಂಭಕ್ಕೆ ಯಾರೂ ಹೋಗಬೇಡಿ. ತಟಸ್ಥವಾಗಿ ಇದ್ದುಕೊಂಡು ಎಲ್ಲವನ್ನೂ ಗಮನಿಸುತ್ತಿರಿ’ ಎಂದು ಹೈಕಮಾಂಡ್ ಸೂಚಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಸಂದೇಶ ರವಾನಿಸಿದೆ. ಇದನ್ನು ಅವರು ಎಲ್ಲ ಶಾಸಕರಿಗೆ ತಿಳಿಸಿದ್ದಾರೆ. ಹೀಗಾಗಿ ಬಿಜೆಪಿಯ ಯಾವ ಶಾಸಕರೂ ಪ‍್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ ಎನ್ನಲಾಗಿದೆ.

ಬುಧವಾರ ಸಂಜೆ 4.30ಕ್ಕೆ ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry