ಜಿಲ್ಲೆಯ 1309 ಮಕ್ಕಳಿಗೆ ಇಂದ್ರಧನುಷ್ ಲಸಿಕೆ

7
ಆಯ್ದ 39 ಗ್ರಾಮಗಳಲ್ಲಿ ಕಾರ್ಯಕ್ರಮ; ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ

ಜಿಲ್ಲೆಯ 1309 ಮಕ್ಕಳಿಗೆ ಇಂದ್ರಧನುಷ್ ಲಸಿಕೆ

Published:
Updated:

ಚಿತ್ರದುರ್ಗ: ಗ್ರಾಮ ಸ್ವರಾಜ್ಯ ಅಭಿಯಾನದಡಿ ಜಿಲ್ಲೆಯಾದ್ಯಂತ ಮೇ 23ರಿಂದ 26ರವರೆಗೆ ತೀವ್ರತರ ಮಿಷನ್ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದರು.

ಸೋಮವಾರ ನಡೆದ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ 6 ವರ್ಷದೊಳಗಿನ 1309 ಮಕ್ಕಳಿಗೆ, ಗರ್ಭಿಣಿ ಮಹಿಳೆಯರಿಗೆ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗಿದೆ

ಎಂದರು.

ಚಿತ್ರದುರ್ಗ ತಾಲ್ಲೂಕಿನ 10, ಚಳ್ಳಕೆರೆ 13, ಹಿರಿಯೂರಿನ 6, ಹೊಳಲ್ಕೆರೆ 5, ಹೊಸದುರ್ಗ 3, ಮೊಳಕಾಲ್ಮೂರು ತಾಲ್ಲೂಕಿನ 3 ಸೇರಿ ಒಟ್ಟು 39 ಗ್ರಾಮಗಳಲ್ಲಿ ಲಸಿಕಾ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿಕ್ಕಪ್ಪನಹಳ್ಳಿಯಲ್ಲಿ ಮೇ 23 ರಂದು ಚಾಲನೆ ನೀಡಲಾಗುವುದು ಎಂದು ಹೇಳಿದರು.

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ನಡೆಯುವ ಈ ಕಾರ್ಯಕ್ರಮದ ನೈಜ ಮಾಹಿತಿಯ ವರದಿಯನ್ನು ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ಎಲ್ಲಾ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ: ಜಿಲ್ಲೆಯಲ್ಲಿ 2 ವರ್ಷದೊಳಗಿನ 1,56,326 ಮಕ್ಕಳಿಗೆ ಅತಿಸಾರ ಬೇಧಿ ನಿಯಂತ್ರಣ ಯೋಜನೆ ಅಡಿಯಲ್ಲಿ ಝಿಂಕ್ ಮತ್ತು ಒ.ಆರ್.ಎಸ್ ದ್ರಾವಣ ನೀಡಲು ಇದೇ ಮೇ 28 ರಿಂದ ಜೂ 9 ರವರೆಗೆ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧಿಕಾರಿ, ಎಲ್ಲಾ ತಾಲ್ಲೂಕುಗಳ ತಾಲ್ಲೂಕು ವೈದ್ಯಾಧಿಕಾರಿಗಳು, ಡಿಎಚ್‍ಒ ಕಚೇರಿಯ ಡಾ. ಕುಮಾರಸ್ವಾಮಿ ಇದ್ದರು.

**

ಈ ಹಿಂದೆ ನಡೆದ ಲಸಿಕಾ ಕಾರ್ಯಕ್ರಮದಿಂದ ದೂರ ಉಳಿದವರು, ಕೈಬಿಟ್ಟ ಮಕ್ಕಳು ಹಾಗೂ ಗರ್ಭಿಣಿಯರನ್ನು ಗುರುತಿಸಿ ಲಸಿಕೆ ಹಾಕಲಾಗುವುದು

– ಡಾ.ಬಿ.ವಿ.ನೀರಜ್, ಜಿಲ್ಲಾ ಆರೋಗ್ಯಾಧಿಕಾರಿ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry