ಯತೀಂದ್ರಗೆ ಸಚಿವ ಸ್ಥಾನಕ್ಕೆ ಆಗ್ರಹ

7

ಯತೀಂದ್ರಗೆ ಸಚಿವ ಸ್ಥಾನಕ್ಕೆ ಆಗ್ರಹ

Published:
Updated:
ಯತೀಂದ್ರಗೆ ಸಚಿವ ಸ್ಥಾನಕ್ಕೆ ಆಗ್ರಹ

ಬೆಂಗಳೂರು: ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಅವರಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು, ಕಾಂಗ್ರೆಸ್‌ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ಮುಖಂಡ ಮತ್ತು ಯತೀಂದ್ರ ಅವರ ತಂದೆ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿದ ಕಾರ್ಯಕರ್ತರ ಗುಂಪು ಈ ಬೇಡಿಕೆ ಇಟ್ಟಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ‘ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನ ಕೈಗೊಳ್ಳಲಿದ್ದು, ನಾನು ಒತ್ತಡ ಹೇರಲು ಆಗುವುದಿಲ್ಲ’ ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry