ಎಸ್‌ಬಿಐಗೆ ₹ 7,718 ಕೋಟಿ ನಷ್ಟ

7

ಎಸ್‌ಬಿಐಗೆ ₹ 7,718 ಕೋಟಿ ನಷ್ಟ

Published:
Updated:

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್‌ ಬ್ಯಾಂಕ್ (ಎಸ್‌ಬಿಐ) 2017–18ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ₹ 7,718 ಕೋಟಿ ನಷ್ಟ ಅನುಭವಿಸಿದೆ.

2016–17ನೇ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 2,815 ಕೋಟಿ ನಿವ್ವಳ ಲಾಭ ಗಳಿಸಿತ್ತು.

ವಸೂಲಿಯಾಗದ ಸಾಲದ (ಎನ್‌ಪಿಎ) ಪ್ರಮಾಣ ಶೇ 3.71 ರಿಂದ  ಶೇ 5.73 ಕ್ಕೆ ಏರಿಕೆಯಾಗಿದೆ. ಇದರಿಂದ ನಷ್ಟ ಉಂಟಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ತ್ರೈಮಾಸಿಕದಲ್ಲಿ ಬ್ಯಾಂಕ್‌ ವರಮಾನ ₹ 57,720 ಕೋಟಿಯಿಂದ ₹ 68,436 ಕೋಟಿಗೆ ಏರಿಕೆಯಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry