ಬೆಂಗಳೂರಿಗೆ ಆಗಮಿಸಿದ ಸೋನಿಯಾ, ರಾಹುಲ್ ಗಾಂಧಿ

7

ಬೆಂಗಳೂರಿಗೆ ಆಗಮಿಸಿದ ಸೋನಿಯಾ, ರಾಹುಲ್ ಗಾಂಧಿ

Published:
Updated:
ಬೆಂಗಳೂರಿಗೆ ಆಗಮಿಸಿದ ಸೋನಿಯಾ, ರಾಹುಲ್ ಗಾಂಧಿ

ಬೆಂಗಳೂರು: ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ (ಡಿಸಿಎಂ) ಆಗಿ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಮಧ್ಯಾಹ್ನ ನಗರಕ್ಕೆ ಆಗಮಿಸಿದರು.

ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದ ಅವರು ಅಲ್ಲಿಂದ ನೇರವಾಗಿ ಕಾಂಗ್ರೆಸ್ ಶಾಸಕರು ತಂಗಿರುವ ಹಿಲ್ಟನ್ ಹೋಟೆಲ್‌ಗೆ ತೆರಳಿದರು. ಅಲ್ಲಿ ಕಾಂಗ್ರೆಸ್‌ ಶಾಸಕರ ಜತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ವರುಣನ ಕಾಟ: ನಗರದಲ್ಲಿ ಭಾರಿ ಮಳೆಯಾಗುತ್ತಿರುವುದು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅಡ್ಡಿ ಉಂಟುಮಾಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry