ಕುಮಾರಸ್ವಾಮಿ ಪದಗ್ರಹಣಕ್ಕೆ ಮಳೆ ಅಡ್ಡಿ?

7

ಕುಮಾರಸ್ವಾಮಿ ಪದಗ್ರಹಣಕ್ಕೆ ಮಳೆ ಅಡ್ಡಿ?

Published:
Updated:
ಕುಮಾರಸ್ವಾಮಿ ಪದಗ್ರಹಣಕ್ಕೆ ಮಳೆ ಅಡ್ಡಿ?

ಬೆಂಗಳೂರು: ಕುಮಾರಸ್ವಾಮಿ ಪ್ರಮಾಣ ವಚನಕ್ಕೆ ಎರಡು ಗಂಟೆ ಬಾಕಿ ಇರುವಾಗಲೇ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.

ಸಮಾರಂಭಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಅಭಿಮಾನಿಗಳು, ಕಾಂಗ್ರೆಸ್ ಮತ್ತು ಜೆಡಿಎಸ್‌ ಕಾರ್ಯಕರ್ತರು ಮಳೆಯಲ್ಲೇ ಕುಮಾರಸ್ವಾಮಿಗೆ ಜೈಕಾರ ಹಾಕುತ್ತ ಉತ್ಸಾಹ ಮೆರೆಯುತ್ತಿದ್ದಾರೆ.

ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಿರುವ ಜನರು ಮಳೆಯಿಂದ ತಪ್ಪಿಸಿಕೊಳ್ಳಲು ಕುರ್ಚಿಗಳು, ಕೌಟೌಟ್‌, ಬ್ಯಾನರ್‌ಗಳನ್ನು ಛತ್ರಿಗಳನ್ನಾಗಿ ಹಿಡಿದುಕೊಂಡಿದ್ದಾರೆ.

ಮಳೆಯ ನಡುವೆಯೂ ಕಾರ್ಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.

ವಿಧಾನಸೌಧದ ಮುಂಭಾಗದಲ್ಲಿ ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry