ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ‘ಎಬಿ ಡಿವಿಲಿಯರ್ಸ್‌’ ವಿದಾಯ

Last Updated 23 ಮೇ 2018, 15:09 IST
ಅಕ್ಷರ ಗಾತ್ರ

ಜೋಹನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್‌ಮನ್‌ ಎಬಿ ಡಿವಿಲಿಯರ್ಸ್ ಅವರು ಬುಧವಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

34 ವರ್ಷದ ಡಿವಿಲಿಯರ್ಸ್,​ ನಿವೃತ್ತಿ ತೆಗೆದುಕೊಳ್ಳಲು ಇದು ಸರಿಯಾದ ಸಮಯ ಎಂದು ಹೇಳುವ ಮೂಲಕ 14 ವರ್ಷದ ಸುದೀರ್ಘ ವೃತ್ತಿ ಜೀವನಕ್ಕೆ ತೆರೆ ಎಳೆದಿದ್ದಾರೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ 114 ಟೆಸ್ಟ್​, 228 ಏಕದಿನ ಹಾಗೂ 78 ಟಿ–20 ಪಂದ್ಯಗಳನ್ನು ಆಡಿರುವ ಡಿವಿಲಿಯರ್ಸ್​ ವೃತ್ತಿ ಜೀವನದ ಶ್ರೇಷ್ಠ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌)ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡದ ಪರ ಆಡಿದ್ದ ಅವರು 141 ಪಂದ್ಯಗಳನ್ನು ಆಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT