ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

7

ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Published:
Updated:
ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ನವದೆಹಲಿ: ಕೇಂದ್ರದ ಎನ್‌ಡಿಎ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ 100ಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು ಬುಧವಾರ ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿ ಪ್ರತಿಭಟನೆ ನಡೆಸಿದರು.

ವ್ಯಾಪಾರಿ, ರೈತ ಸಂಘಟನೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ಸಂಘಟನೆಗಳು, ದಲಿತ, ಆದಿವಾಸಿ ಸಂಘಟನೆಗಳು, ಪರಿಸರವಾದಿಗಳು ಸೇರಿದಂತೆ ಹಲವು ಸಂಘಟನೆಗಳ ಕಾರ್ಯಕರ್ತರು ‘ಜನ್ ಏಕತಾ ಜನ್ ಅಧಿಕಾರ್ ಆಂದೋಲನ್(ಜೆಇಜೆಎಎ) ನೇತೃತ್ವದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ಕಿಸಾನ್ ಸಭಾ(ಎಐಕೆಎಸ್‌) ಮುಖಂಡ ಹನ್ನನ್ ಮೊಲ್ಲಾ, ‘ಎನ್‌ಡಿಎ ಸರ್ಕಾರ ನಾಲ್ಕು ವರ್ಷದ ಅವಧಿಯಲ್ಲಿ ಶ್ರಮಿಕರ ಜೀವನವನ್ನು ಸರ್ವನಾಶ ಮಾಡಿದೆ. ‘ಸಬ್‌ ಕಾ ವಿಕಾಸ್’ ಭರವಸೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೆಲ ಕಾರ್ಪೊರೇಟ್ ಕಂಪನಿಗಳ ‘ವಿಕಾಸ’ವನ್ನು ಮಾತ್ರ ಮಾಡಿದ್ದಾರೆ. ಸರ್ಕಾರ ತನ್ನ ನೀತಿಗಳನ್ನು ಬದಲಿಸಿಕೊಳ್ಳದಿದ್ದರೆ ಜನರೇ ಸರ್ಕಾರವನ್ನು ಬದಲಿಸಲಿದ್ದಾರೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry