ಒಂದನೇ ತರಗತಿಗೆ 5 ವರ್ಷ 5 ತಿಂಗಳು ವಯೋಮಿತಿ ನಿಗದಿ

7

ಒಂದನೇ ತರಗತಿಗೆ 5 ವರ್ಷ 5 ತಿಂಗಳು ವಯೋಮಿತಿ ನಿಗದಿ

Published:
Updated:

ಬೆಂಗಳೂರು: ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಒಂದನೇ ತರಗತಿ ಓದುವ ಮಕ್ಕಳಿಗೆ 5 ವರ್ಷ 5 ತಿಂಗಳು ಪೂರ್ಣಗೊಂಡಿರಬೇಕು ಎಂದು ವಯೋಮಿತಿ ನಿಗದಿಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಆದೇಶದ ಅನ್ವಯ ಗರಿಷ್ಠ 7 ವರ್ಷದವರೆಗೂ ಮಕ್ಕಳು ಒಂದನೇ ತರಗತಿಗೆ ದಾಖಲಾತಿ ಪಡೆಯಬಹುದು. ಹೋದ ವರ್ಷ ಕೂಡ ಇದೇ ವಯೋಮಿತಿ ನಿಗದಿಗೊಳಿಸಲಾಗಿತ್ತು. ಆದರೆ ಈ ವರ್ಷದ ಆರಂಭದಲ್ಲಿ 5 ವರ್ಷ 10 ತಿಂಗಳಿಗೆ ಬದಲಿಸಲಾಗಿತ್ತು. ಈಗ ಮತ್ತೊಮ್ಮೆ ಮೊದಲಿನ ಆದೇಶವನ್ನೇ ಮುಂದುವರಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry