‘ಹೊಸ ಪ್ರಕರಣ ಇಲ್ಲ’

7

‘ಹೊಸ ಪ್ರಕರಣ ಇಲ್ಲ’

Published:
Updated:

ಮಂಗಳೂರು: ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಯಾವುದೇ ಹೊಸ ನಿಫಾ ಸೋಂಕು ಪ್ರಕರಣಗಳು ವರದಿ

ಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿ ಕಾರಿ ಡಾ.ರಾಮಕೃಷ್ಣರಾವ್‌ ತಿಳಿಸಿದ್ದಾರೆ.

ಗಡಿ ಭಾಗದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಖಾಸಗಿ ಆಸ್ಪತ್ರೆಗಳ ಜತೆಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಲಾಗಿದೆ. ಇದುವರೆಗೆ ಯಾವುದೇ ಹೊಸ ಪ್ರಕರಣಗಳು ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜನರು ಆತಂಕಪಡುವ ಅಗತ್ಯವಿಲ್ಲ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಆರೋಗ್ಯ ಇಲಾಖೆಯೂ ನಿಫಾ ವೈರಸ್‌ ಬಗ್ಗೆ ತೀವ್ರ ನಿಗಾ ವಹಿಸಿದೆ. ಮಂಗಳವಾರ ಇಬ್ಬರು ರೋಗಿಗಳ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಆದರೆ, ಇದುವರೆಗೆ ದೃಢಪಟ್ಟಿಲ್ಲ ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ನಿಫಾ ಶಂಕಿತ ಇಬ್ಬರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಸರ್ವೈಲನ್ಸ್ ಅಧಿಕಾರಿ ಡಾ. ರಾಜೇಶ್‌ ತಿಳಿಸಿದ್ದಾರೆ.

ಈ ಇಬ್ಬರ ಗಂಟಲು ದ್ರವದ ಮಾದರಿಯನ್ನು ಮಣಿಪಾಲ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದುವರೆಗೆ ವರದಿ ಬಂದಿಲ್ಲ. ಗುರುವಾರ ಬೆಳಿಗ್ಗೆ ವರದಿ ಕೈಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry