ನದಿಯಲ್ಲಿ ಕೊಚ್ಚಿಹೋದ ಯುವಕರು

7

ನದಿಯಲ್ಲಿ ಕೊಚ್ಚಿಹೋದ ಯುವಕರು

Published:
Updated:
ನದಿಯಲ್ಲಿ ಕೊಚ್ಚಿಹೋದ ಯುವಕರು

ಹೊಸಪೇಟೆ (ಬಳ್ಳಾರಿ ಜಿಲ್ಲೆ): ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಹರಿಯುವ ತುಂಗಭದ್ರಾ ನದಿಯಲ್ಲಿ, ಬುಧವಾರ ಬೆಳಿಗ್ಗೆ ಸ್ನಾನಕ್ಕೆಂದು ಇಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ಪೆದ್ದಟೂರು ಗ್ರಾಮದಿಂದ ಪ್ರವಾಸಕ್ಕೆಂದು ಬಂದಿದ್ದ ವಿನಯ (19) ಹಾಗೂ ನವೀನ್‌ (18), ಸ್ಥಳೀಯರು ನೀಡಿದ ಎಚ್ಚರಿಕೆಯನ್ನು ಕಡೆಗಣಿಸಿ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದಾರೆ. ಶವಗಳ ಶೋಧ ಕಾರ್ಯ ಮುಂದುವರಿದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry