ಚೆನ್ನೈ: ಡಿಎಂಕೆ ಅಧ್ಯಕ್ಷ ಸ್ಟ್ಯಾಲಿನ್ ಬಂಧನ

5

ಚೆನ್ನೈ: ಡಿಎಂಕೆ ಅಧ್ಯಕ್ಷ ಸ್ಟ್ಯಾಲಿನ್ ಬಂಧನ

Published:
Updated:
ಚೆನ್ನೈ: ಡಿಎಂಕೆ ಅಧ್ಯಕ್ಷ ಸ್ಟ್ಯಾಲಿನ್ ಬಂಧನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡಿದ್ದ ಡಿಎಂಕೆ ಅಧ್ಯಕ್ಷ ಸ್ಟ್ಯಾಲಿನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತಿಭಟನಾಕಾರರ ಸಾವಿಗೆ ಪಳನಿಸ್ವಾಮಿ ನೇತೃತ್ವದ ಸರ್ಕಾರವೇ ಕಾರಣ ಎಂದು ಆರೋಪಿಸಿದ ಡಿಎಂಕೆ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ದರು. ಆಗ ಪೊಲೀಸರು ಮತ್ತು ಡಿಎಂಕೆ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಯಿತು.

ಪ್ರತಿಭಟನಾನಿರತ 12 ಅಮಾಯಕರು ಸಾವಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಮುಖ್ಯಮಂತ್ರಿ ನಿಷ್ಪಲರಾಗಿದ್ದಾರೆ. ಜಿಲ್ಲೆಗಳಿಗೆ ತೆರಳಿ ಜನರನ್ನು ಭೇಟಿ ಮಾಡಿಲ್ಲ. ಹಾಗಾಗಿ ಪಳನಿಸ್ವಾಮಿ ಜತೆಗೆ ಡಿಜಿಪಿ ರಾಜೇಂದ್ರನ್ ಇವರಿಬ್ಬರು ರಾಜೀನಾಮೆ ನೀಡಬೇಕೆಂದು ಸ್ಟ್ಯಾಲಿನ್ ಒತ್ತಾಯಿಸಿದ್ದಾರೆ.

ಸ್ಟೆರ್‌ಲೆಟ್ ತಾಮ್ರ ಸಂಸ್ಕರಣ ಘಟಕದಿಂದ ಪರಿಸರಕ್ಕೆ ಹಾನಿಯಾಗುತ್ತಿರುವ ಕಾರಣ ಘಟಕವನ್ನು ಶಾಶ್ವತವಾಗಿ ಮುಚ್ಚಬೇಕೆಂದು ಪ್ರತಿಭಟನಾಕಾರರು ಪ್ರತಿಭಟನೆ ಕೈಗೊಳ್ಳಲಾಗಿತ್ತು. ಇದರಲ್ಲಿ 13 ಮಂದಿ ಮೃತಪಟ್ಟಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry